ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲು ಅನಿಲ್ ಕುಂಬ್ಳೆ ಸಮರ್ಥರು: ಸಚಿನ್ ತೆಂಡೂಲ್ಕರ್
ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿರುವ ಮಾಜಿ ಇಂಡಿಯನ್ ಸ್ಕಿಪ್ಪರ್ ಅನಿಲ್ ಕುಂಬ್ಳೆ ತಂಡವನ್ನು ಮುನ್ನಡೆಸಲು ಸಮರ್ಥರಾಗಿದ್ದಾರೆ ಎಂದು ..

ನವದೆಹಲಿ: ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿರುವ ಮಾಜಿ ಇಂಡಿಯನ್ ಸ್ಕಿಪ್ಪರ್ ಅನಿಲ್ ಕುಂಬ್ಳೆ ತಂಡವನ್ನು ಮುನ್ನಡೆಸಲು ಸಮರ್ಥರಾಗಿದ್ದಾರೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಲಂಡನ್ ನಲ್ಲಿ ಖಾಸಗಿ ಚಾನೆಲ್ ನಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್ 20 ವರ್ಷ ಅನಿಲ್ ಕುಂಬ್ಳೆ ಜೊತೆ ಕ್ರಿಕೆಟ್ ಆಡಿದ್ದೇನೆ. ಪಂದ್ಯದಲ್ಲಿ ಹೇಗೆ ಉತ್ತಮ ಪ್ರದರ್ಶನ ತೋರಲು ಹೇಗೆ ಸಿದ್ಧತೆ ನಡೆಸಬೇಕು ಎಂಬುದರ ಬಗ್ಗೆ ಕುಂಬ್ಳೆ ಅವರಿಗೆ ಅರಿವಿದೆ. ಹೀಗಾಗಿ ಟೀಂ ಇಂಡಿಯಾ ಮುಂದಿನ ಎಲ್ಲಾ ಪಂದ್ಯಗಳನ್ನು ಉತ್ತಮ ಪ್ರದರ್ಶನ ನೀಡಲಿದೆ ಎಂದು ಸಚಿನ್ ಆಶಾಭಾವನೆ ವ್ಯಕ್ತ ಪಡಿಸಿದ್ದಾರೆ.
ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಮೂರು ಸದಸ್ಯರ ಆಯ್ಕೆ ಸಮಿತಿಯ ತಂಡದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಇದ್ದರು. ಭಾರತೀಯ ಕ್ರಿಕೆಟ್ ತಂಡದ ಆಟಗಾರರಿಗೆ ಅನಿಲ್ ಕುಂಬ್ಳೆ ಅಣ್ಣನಿದ್ದಂತೆ ಎಂದಹ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


