ಕ್ರಿಕೆಟ್

ವಿರಾಟ್ ಕೊಹ್ಲಿ ಸೇರಿದಂತೆ ಸಹೋದ್ಯೋಗಿಗಳಿಗೆ ಉಡುಗೊರೆ ನೀಡಿದ ಕ್ರಿಸ್ ಗೇಲ್

ಕ್ರಿಸ್ ಗೇಲ್ ಐಪಿಎಲ್ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸ್ವದೇಶ ವೆಸ್ಟ್​ಇಂಡೀಸ್​ಗೆ ಹೊರಟಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಸಹ ಆಟಗಾರ ಎಬಿ ಡಿವಿಲಿಯರ್ಸ್...

ವಿರಾಟ್ ಕೊಹ್ಲಿ ಸೇರಿದಂತೆ ಸಹೋದ್ಯೋಗಿಗಳಿಗೆ ಉಡುಗೊರೆ ನೀಡಿದ ಕ್ರಿಸ್ ಗೇಲ್
ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್
Published On :

ನವದೆಹಲಿ: ವಿವಾದದಿಂದಾಗಿ ಸದಾ ಸುದ್ದಿಯಲ್ಲಿರುವ ವೆಸ್ಟ್​ಇಂಡೀಸ್​ನ ದೈತ್ಯ ಕ್ರಿಕೆಟಿಗ ಹಾಗೂ ಆರ್​ಸಿಬಿಯ ಆರಂಭಿಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್ ಐಪಿಎಲ್ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸ್ವದೇಶ ವೆಸ್ಟ್​ಇಂಡೀಸ್​ಗೆ ಹೊರಟಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಸಹ ಆಟಗಾರ ಎಬಿ ಡಿವಿಲಿಯರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಯುವರಾಜ್ ಸಿಂಗ್ ಅವರಿಗೆ ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಸ್ವತಃ ಗೇಲ್ ಬರೆದಿರುವ ‘ಸಿಕ್ಸ್ ಮಶಿನ್, ಐ ಡೊಂಟ್ ಲೈಕ್ ಕ್ರಿಕೆಟ್,ಐ ಲವ್ ಇಟ್’ ಎಂಬ ಪುಸ್ತಕವನ್ನು ಕೊಹ್ಲಿ, ಎಬಿಡಿ ಹಾಗೂ ಯುವಿಗೆ ನೀಡಿ ಹರ್ಷವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಬಗ್ಗೆ ಹಾಗೂ ಐಪಿಎಲ್ ಒದಗಿಸಿದ ಅವಕಾಶಗಳ ಬಗ್ಗೆ ಮೆಚ್ಚುಗೆಯ ಮಾತಗಳನ್ನು ಆಡಿದ್ದಾರೆ. ಈ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಗೇಲ್ ಶೇರ್ ಮಾಡುವ ಮೂಲಕ ತಮ್ಮ ಸ್ನೇಹ ಯಾವರೀತಿ ಗಟ್ಟಿಯಾದದ್ದು ಎನ್ನುವುದನ್ನು ಸಾರಿದ್ದಾರೆ.

ಈ ಪುಸ್ತಕ ಕ್ರಿಸ್ ಗೇಲ್ ಅವರ ಕ್ರಿಕೆಟ್ ಬದುಕಿನ ಹಲವು ಮಜಲುಗಳನ್ನು ಅನಾವರಣ ಮಾಡುತ್ತದೆ. ಐಪಿಎಲ್ ಫೈನಲ್ ಪಂದ್ಯದಲ್ಲಿ ಗೇಲ್ ಕೇವಲ 38 ಎಸೆತಗಳಲ್ಲಿ 76 ರನ್ ಸಿಡಿಸುವ ಮೂಲಕ ಅಭಿಮಾನಿಗಳಿಗೆ ರಸದೌತಣ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.