ಕ್ರಿಕೆಟ್

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ವೆಂಕಟೇಶ್ ಪ್ರಸಾದ್

ಟೀಂ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಆಯ್ಕೆ ಬಯಸಿ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಅರ್ಜಿ...

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ವೆಂಕಟೇಶ್ ಪ್ರಸಾದ್
ವೆಂಕಟೇಶ್ ಪ್ರಸಾದ್
Published On :

ನವದೆಹಲಿ: ಟೀಂ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಆಯ್ಕೆ ಬಯಸಿ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಬಲಗೈ ವೇಗಿ ಪ್ರಸಾದ್‌ ಕೋಚ್‌ ಸ್ಥಾನದ ಆಕಾಂಕ್ಷಿಯಾಗಿದ್ದು,  ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ವಿಷಯವನ್ನು ಅವರು ಖಚಿತಪಡಿಸಿದ್ದಾರೆ.

ಪ್ರಸಾದ್‌ ಸದ್ಯಕ್ಕೆ ಬಿಸಿಸಿಐ ಜೂನಿಯರ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಹಿಂದೆ ಭಾರತ ತಂಡದ ಬೌಲಿಂಗ್‌ ಕೋಚ್‌ ಆಗಿ  ಕೆಲಸ ಮಾಡಿದ್ದರು. ಇವರು ಕೋಚ್‌ ಆಗಿದ್ದ ಅವಧಿಯಲ್ಲಿ ಮಹೇಂದ್ರ ಸಿಂಗ್ ದೋನಿ ನಾಯಕತ್ವದಲ್ಲಿ ಭಾರತ ತಂಡ 2007ರ ಐಸಿಸಿ ಟ್ವೆಂಟಿ–20 ಟೂರ್ನಿಯಲ್ಲಿ ಚಾಂಪಿಯನ್‌ ಆಗಿತ್ತು. ಎರಡು ವರ್ಷ ಪ್ರಸಾದ್‌ ಕೋಚ್‌ ಆಗಿ ಕೆಲಸ ಮಾಡಿದ್ದರು.

ಐಪಿಎಲ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಮತ್ತು ಆರ್‌ಸಿಬಿ ತಂಡಗಳಿಗೂ ಕೋಚ್‌ ಆಗಿದ್ದರು. 46 ವರ್ಷದ ಪ್ರಸಾದ್‌ ಉತ್ತರ ಪ್ರದೇಶ ರಣಜಿ ತಂಡಕ್ಕೂ ತರಬೇತಿ ನೀಡಿದ ಅನುಭವ ಹೊಂದಿದ್ದಾರೆ.

ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಭಾರತ ತಂಡದ ಮುಖ್ಯ ಕೋಚ್‌ ಆಗಲು  ಸಾಕಷ್ಟು ಪೈಪೋಟಿ ನಡೆಯುತ್ತಿದೆ. ಭಾರತ ತಂಡದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ, ಸೀನಿಯರ್ ಆಯ್ಕೆ ಸಮಿತಿಯ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಅವರೂ ಕೋಚ್‌ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.