ಟೀಂ ಇಂಡಿಯಾ ಕೋಚ್ ಆಯ್ಕೆ ಸಮಿತಿಗೆ ಸಚಿನ್, ಗಂಗೂಲಿ, ಲಕ್ಷ್ಮಣ್ ನೇಮಕ
ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಆಯ್ಕೆ ಪ್ರಕ್ರಿಯೆ ಸಂಬಂಧ ಕ್ರಿಕೆಟರುಗಳಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್

ನವದೆಹಲಿ: ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಆಯ್ಕೆ ಪ್ರಕ್ರಿಯೆ ಸಂಬಂಧ ಕ್ರಿಕೆಟರುಗಳಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರನ್ನು ಒಳಗೊಂಡ ಸಮಿತಿ ರಚನೆಯಾಗಿದೆ.
ಬಿಸಿಸಿಐ ಮಾಜಿ ಕಾರ್ಯದರ್ಶಿ ಮತ್ತು ಕ್ರಿಕೆಟರ್ ಸಂಜಯ್ ಜಗದಾಲೆ ಈ ಸಮಿತಿಯ ಮುಖ್ಯ ಸಮನ್ವಯಕರಾಗಿದ್ದಾರೆ. ಟೀಂ ಇಂಡಿಯಾ ಹೆಡ್ ಕೋಚ್ ಹುದ್ದೆಗೆ 57 ಅರ್ಜಿದಾರರ ಪೈಕಿ 21 ಅಭ್ಯರ್ಥಿಗಳನ್ನು ಬಿಸಿಸಿಐ ಪಟ್ಟಿ ಮಾಡಿದೆ.
ಈ 21 ಮಂದಿ ಬಿಸಿಸಿಐ ಅರ್ಹತೆ ಮಾನದಂಡವನ್ನು ಪೂರೈಸಿದ್ದಾರೆ. ತೆಂಡೂಲ್ಕರ್, ಗಂಗೂಲಿ ಮತ್ತು ಲಕ್ಷ್ಮಣ್ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರಿಗೆ ಜೂನ್ 22ರಂದು ವರದಿ ಸಲ್ಲಿಸಲಿದ್ದಾರೆ. ಮಂಡಳಿಯು ಕಾರ್ಯಕಾರಿ ಸಮಿತಿಯ ಸಭೆಯ ಬಳಿಕ ತನ್ನ ಪ್ರಕಟಣೆಯನ್ನು ನೀಡುವ ನಿರೀಕ್ಷೆಯಿದೆ.
ಜುಲೈ-ಆಗಸ್ಟ್‌ನಲ್ಲಿ ನಡೆಯುವ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ ಹೊಸ ಕೋಚ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಈ ಮಧ್ಯೆ, ಸಂಜಯ್ ಬಂಗಾರ್ ಜಿಂಬಾಬ್ವೆಯಲ್ಲಿ ಪ್ರಸಕ್ತ ಏಕದಿನ ಸರಣಿಗೆ ಪರ್ಯಾಯ ಕೋಚ್ ಆಗಿದ್ದಾರೆ.
ಉನ್ನತ ಹುದ್ದೆಗೆ ಅತೀ ಗಣ್ಯ ಅಭ್ಯರ್ಥಿಗಳಿದ್ದು, ಮಾಜಿ ಟೀಂ ಡೈರೆಕ್ಟರ್ ರವಿ ಶಾಸ್ತ್ರಿ ಇನ್ನೊಂದು ಅವಧಿಗಾಗಿ ಎದುರುನೋಡುತ್ತಿದ್ದು, ಸಂದೀಪ್ ಪಾಟೀಲ್ ಮತ್ತು ಅನಿಲ್ ಕುಂಬ್ಳೆಯಿಂದ ಪೈಪೋಟಿ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


