ರಿಕ್ಕಿ ಪಾ೦ಟಿ೦ಗ್ ದಾಖಲೆ ಸರಿಗಟ್ಟಿದ ಎಂಎಸ್ ಧೋನಿ
ಹರಾರೆಯಲ್ಲಿ ಬುಧವಾರ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕ್ಕಿ ಪಾಂಟಿಂಗ್ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಹರಾರೆ: ಹರಾರೆಯಲ್ಲಿ ಬುಧವಾರ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕ್ಕಿ ಪಾಂಟಿಂಗ್ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಟೆಸ್ಟ್, ಏಕದಿನ ಹಾಗೂ ಟಿ20 ಮೂರು ಮಾದರಿಯಲ್ಲಿ ಒಟ್ಟು 324 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಹಿಂದೆ ಅತೀ ಹೆಚ್ಚು ಪಂದ್ಯಗಳಲ್ಲಿ ಅಂದರೆ 324 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಖ್ಯಾತಿ ರಿಕ್ಕಿ ಪಾಂಟಿಂಗ್ ಅವರ ಹೆಸರಲ್ಲಿತ್ತು. ಇದೀಗ ಧೋನಿ ಈ ದಾಖಲೆಯನ್ನು ಸರಿಗಟ್ಟಿದ್ದು, ಇನ್ನೊಂದು ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಿದರೆ ಅತೀ ಹೆಚ್ಚು ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿದ ಖ್ಯಾತಿ ಧೋನಿ ಅವರದ್ದಾಗುತ್ತದೆ.
ಧೋನಿ ನಾಯಕತ್ವದಲ್ಲಿ ಭಾರತ ತಂಡ ಇದೇ ಜುಲೈ ತಿಂಗಳಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿ ಈ ದಾಖಲೆ ಮುರಿಯಲಿದೆ. ಹರಾರೆಯಲ್ಲಿ ನಿನ್ನೆ ನಡೆದ 3ನೇ ಟಿ20 ಪಂದ್ಯ ಧೋನಿ ನಾಯಕತ್ವದ 324ನೇ ಪಂದ್ಯವಾಗಿದೆ. 2007ರಲ್ಲಿ ನಾಯಕನಾಗಿ ನೇಮಕವಾಗಿದ್ದ ಧೋನಿ 60 ಟೆಸ್ಟ್, 194 ಏಕದಿನ ಹಾಗೂ 70 ಟಿ20 ಪ೦ದ್ಯಗಳಲ್ಲಿ ಭಾರತ ತ೦ಡವನ್ನು ಮುನ್ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


