ಆಫ್ಘನ್ ಕ್ರಿಕೆಟ್ ತಂಡದ ಕೋಚ್ ಆಗಿ ಲಾಲ್ ಚಂದ್ ರಜಪೂತ್ ಆಯ್ಕೆ
ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಭಾರತದ ಮಾಜಿ ಆಟಗಾರ ಲಾಲ್ಚಂದ್ ರಜಪೂತ್ ಅವರು ಆಯ್ಕೆಯಾಗಿದ್ದಾರೆ...

ಕಾಬೂಲ್: ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಭಾರತದ ಮಾಜಿ ಆಟಗಾರ ಲಾಲ್ಚಂದ್ ರಜಪೂತ್ ಅವರು ಆಯ್ಕೆಯಾಗಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಮತ್ತು ಅಂಡರ್ 19 ಕ್ರಿಕೆಟ್ ತಂಡದ ಮಾಜಿ ಕೋಚ್ ಲಾಲ್ ಚಂದ್ ರಜಪೂತ್ ಅವರನ್ನು ಆಫ್ಘಾನಿಸ್ತಾನ ಕ್ರಿಕೆಟ್ ಸಂಸ್ಥೆ ನೂತನ ಕೋಚ್ ಆಗಿ ಆಯ್ಕೆ ಮಾಡಿದೆ. ಟಿ20 ವಿಶ್ವಕಪ್ ಸರಣಿ ಬಳಿಕ ಕೋಚ್ ಆಗಿದ್ದ ಪಾಕಿಸ್ತಾನದ ಮಾಜಿ ಆಟಗಾರ ಇಂಜಮಾನ್ ಉಲ್ ಹಕ್ ಅವರು ಅವರು ಕಳೆದ ಏಪ್ರಿಲ್ನಲ್ಲಿ ಹುದ್ದೆಗೆ ರಾಜಿನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಪ್ರಧಾನ ಕೋಚ್ ಸ್ಥಾನಕ್ಕೆ ಲಾಲ್ ಚಂದ್ ರಜಪೂತ್ ಅವರು ಆಯ್ಕೆಯಾಗಿದ್ದಾರೆ.
ಭಾರತ ಕ್ರಿಕೆಟ್ ತಂಡ ಆರಂಭಿಕ ಬ್ಯಾಟ್ಸಮನ್ ಆಗಿದ್ದ ಲಾಲ್ ಚಂದ್ ರಜಪೂತ್ ಅವರು ಈ ಹಿಂದೆ ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿದ್ದರು. ರಜಪೂತ್ ಅವರು ಕೋಚ್ ಸ್ಥಾನ ನಿಭಾಯಿಸಲು ಅರ್ಹವ್ಯಕ್ತಿಯಾಗಿದ್ದು, ಈ ಆಯ್ಕೆಯಿಂದ ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗೆ ಪ್ರಯೋಜನವಾಗಲಿದೆ. ಕೋಚ್ ಸ್ಥಾನಕ್ಕೆ ಹಲವಾರು ಅರ್ಜಿಗಳು ಬಂದಿದ್ದವಾದರೂ ಕೊನೆಯ ಹಂತದಲ್ಲಿ ಭಾರತದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಮತ್ತು ಲಾಲ್ ಚಂದ್ ಅವರ ಅರ್ಜಿಯನ್ನು ಪರಿಗಣಿಸಲಾಗಿತ್ತು. ಅಂತಿಮವಾಗಿ ಲಾಲ್ ಚಂದ್ ರಜಪೂತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ದನಿಶ್ ನಸೀಮುಲ್ಲಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


