ತಂಡಕ್ಕಿಂತ ಯಾರೂ ದೊಡ್ಡವರಲ್ಲ; ಅನಿಲ್ ಕುಂಬ್ಳೆ
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ಅನಿಲ್ ಕುಂಬ್ಳೆ ಅವರು ತಂಡಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ...

ಬೆಂಗಳೂರು: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ಅನಿಲ್ ಕುಂಬ್ಳೆ ಅವರು ತಂಡಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.
ಟೀಂ ಇಂಡಿಯಾದ ಕೋಚ್ ಆಗಿ ಸೇವೆ ಆರಂಭಿಸಿದ ಅನಿಲ್ ಕುಂಬ್ಳೆ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ರವಿ ಶಾಸ್ತ್ರಿ ಜತೆ ದೂರವಾಣಿ ಕರ ಮಾಡಿ ಮಾತನಾಡಿದ್ದೇನೆ. ಅವರಿಗೂ ಸಹ ತಂಡಕ್ಕಿಂತ ಇಲ್ಲಿ ಯಾರೂ ದೊಡ್ಡವರಲ್ಲ. ಹೀಗಾಗಿ ತಂಡದ ಉತ್ತಮ ಪ್ರದರ್ಶನ ನನಗೆ ಮುಖ್ಯ ಎಂದು ಹೇಳಿದ್ದಾಗಿ ಕುಂಬ್ಳೆ ಹೇಳಿದ್ದಾರೆ.
ಇಲ್ಲಿ ಯಾರೂ ಖಾಯಂ ಅಲ್ಲ. ನನ್ನಿಂದಲೂ ಉತ್ತಮ ತರಬೇತಿ ಸಾಧ್ಯವಾಗದೇ ಇದ್ದರೇ ನಾನೇ ಹೊರಬರುತ್ತೇನೆ. ಅಥವಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನನ್ನನ್ನು ಇರಿಸಿಕೊಳ್ಳುವುದಿಲ್ಲ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.
ಮುಂದಿನ ಟೆಸ್ಟ್ ಸರಣಿ ನನ್ನ ಮುಂದಿರುವ ಪ್ರಮುಖ ಸವಾಲಾಗಿದೆ. ಇದನ್ನು ಸವಾಲಾಗಿ ಎದುರಿಸುತ್ತೇನೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಂಡ ಉತ್ತಮ ಪ್ರದರ್ಶನ ನೀಡುತ್ತದೆನ್ನುವ ವಿಶ್ವಾಸ ನನಗಿದೆ. ಉತ್ತಮ ಪ್ರದರ್ಶನಕ್ಕಾಗಿ ತಂಡವನ್ನು ಹೇಗೆ ತರಬೇತಿಗೊಳಿಸಬೇಕು ಎನ್ನುವ ಬಗ್ಗೆ ಅನುಭವಿಗಳ ಜತೆ ಚರ್ಚಿಸಿದ್ದೇನೆ ಎಂದು ಕುಂಬ್ಳೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


