ಧರ್ಮಶಾಲಾದಲ್ಲಿ ಪಂದ್ಯಕ್ಕೆ ವಿರೋಧ: ಆತಂಕ ವ್ಯಕ್ತಪಡಿಸಿದ ಪಿಸಿಬಿ
ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ-ಪಾಕ್ ನಡುವಿನ ಟಿ-20 ಪಂದ್ಯಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ...

ಲಾಹೋರ್: ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ-ಪಾಕ್ ನಡುವಿನ ಟಿ-20 ಪಂದ್ಯಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಸ್ಟೇಡಿಯಂ ಪರಿಶೀಲನೆಗೆ ಉನ್ನತ ಮಟ್ಟದ ತಂಡವೊಂದನ್ನು ಅಂತಿಮಗೊಳಿಸಿರುವುದಾಗಿ ತಿಳಿದುಬಂದಿದೆ.
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮಾರ್ಚ್ 19 ರಂದು ಭಾರತ, ಪಾಕ್ ನಡುವೆ ಟಿ-20 ಪಂದ್ಯ ನಿಗದಿ ಮಾಡಲಾಗಿದೆ. ಆದರೆ, ಧರ್ಮಶಾಲಾದಲ್ಲಿ ನಡೆಯುವ ಪಂದ್ಯಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿವೆ. ಹೀಗಾಗಿ ತಮ್ಮ ಆಟಗಾರರ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇದೀಗ ತ್ರಿಸದಸ್ಯ ತಂಡದಿಂದ ಭದ್ರತೆ ಕುರಿತಂತೆ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯಾವಳಿ ಸದಾ ರೋಚಕ ಹಣಾಹಣಿಯಾಗಿದ್ದು, ಈ ಭಾರಿ ಉಭಯ ರಾಷ್ಟ್ರಗಳ ನಡುವೆ ವಿಶ್ವಕಪ್ 20 ಪಂದ್ಯವು ಧರ್ಮಶಾಲಾದಲ್ಲಿ ಆಯೋಜಿಸಲಾಗಿದೆ. ಈ ಪಂದ್ಯಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿವೆ. ಹುತಾತ್ಮ ಯೋಧರ ತವರು ನೆಲವಾಗಿರುವ ಹಿಮಾಚಲ ಪ್ರದೇಶಕ್ಕೆ ಪಾಕಿಸ್ತಾನ ಕ್ರಿಕೆಟಿಗರು ಬಂದು ಆಡುವುದನ್ನು ಯೋಧರ ಕುಟುಂಬ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಲದೆ, ಕೆಲವು ಸಂಘಟನೆಗಳು ಪಂದ್ಯ ಆಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆಗಳನ್ನು ಹಾಕಿದೆ.
ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಟಗಾರರ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿತ್ತು. ಅಲ್ಲದೆ, ಭದ್ರತೆಗೆ ತಂಡವನ್ನು ನಿಯೋಜಿಸಿ ಪರಿಶೀಲನೆ ನಡೆಸುವುದಾಗಿ ಹೇಳಿತ್ತು. ಇದೀಗ 15 ಸದಸ್ಯರ ನೇತೃತ್ವದ ತಂಡವೊಂದನ್ನು ಭದ್ರತೆಗೆ ನೇಮಿಸಿರುವ ಅಲ್ಲಿನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


