ಐಸಿಸಿ ಟಿ20 ವಿಶ್ವಕಪ್: ಲಂಕಾ ಬೌಲರ್ಗಳ ಬೆವರಿಳಿಸಿದ ಕಿವೀಸ್
ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಬರೊಬ್ಬರಿ 74 ರನ್ ಗಳ ಬೃಹತ್ ರನ್ ಗಳ ಅಂತರದ ಜಯ ಸಾಧಿಸಿದೆ...

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಬರೊಬ್ಬರಿ 74 ರನ್ ಗಳ ಬೃಹತ್ ರನ್ ಗಳ ಅಂತರದ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಕೋರಿ ಆಂಡರ್ಸನ್ (60 ರನ್) ಹಾಗೂ ಕಾಲಿನ್ ಮುನ್ರೋ (67 ರನ್) ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಶ್ರೀಲಂಕಾ ತಂಡ ತಿರುಮಾನ್ನೆ (41 ರನ್), ಕಪಗದೇರಾ (38 ರನ್) ಮತ್ತು ಮಾಥ್ಯೂಸ್ (ಅಜೇಯ 25 ರನ್) ಅವರ ನೆರವಿನಿಂದ ಉತ್ತಮ ಪೈಪೋಟಿ ನೀಡಿತಾದರೂ ಅಂತಿಮವಾಗಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳನಷ್ಟೇ ಶಕ್ತವಾಯಿತು.
ಆ ಮೂಲಕ ನ್ಯೂಜಿಲೆಂಡ್ ವಿರುದ್ಧ ಬರೊಬ್ಬರಿ 74 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


