ಐಸಿಸಿ ಮಹಿಳಾ ವಿಶ್ವಕಪ್: ಭಾರತ ತಂಡದ ಶುಭಾರಂಭ, ಬಾಂಗ್ಲಾ ವಿರುದ್ಧ 72 ರನ್ ಜಯ
ಐಸಿಸಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಭಾರತದ ವನಿತೆಯರು ಶುಭಾರಂಭ ಮಾಡಿದ್ದು, ಬಾಂಗ್ಲಾ..

ಬೆಂಗಳೂರು: ಐಸಿಸಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಭಾರತದ ವನಿತೆಯರು ಶುಭಾರಂಭ ಮಾಡಿದ್ದು, ಬಾಂಗ್ಲಾದೇಶದ ವಿರುದ್ಧ ಬರೊಬ್ಬರಿ 72 ರನ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ವನಿತೆಯರು, ನಿಗದಿತ 20 ಓವರ್ ಗಳಲ್ಲಿ ನಾಯಕಿ ಮಿಥಾಲಿ ರಾಜ್ (42 ರನ್), ವಿಆರ್ ವನಿತಾ (38 ರನ್), ಕೌರ್ (40 ರನ್) ಮತ್ತು ವೇದಾ ಕೃಷ್ಣ ಮೂರ್ತಿ (ಅಜೇಯ 36) ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ 163 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಬಾಂಗ್ಲಾಪರ ರುಮಾನ ಅಹ್ಮದ್ ಮತ್ತು ಫಹಿಮಾ ಖತುನ್ ತಲಾ 2 ವಿಕೆಟ್ ಪಡೆದರೆ, ನಹಿದಾ ಅಖ್ತರ್ 1 ವಿಕೆಟ್ ಪಡೆದರು. ಬಳಿಕ ಭಾರತ ನೀಡಿದ 164 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿದ ಬಾಂಗ್ಲಾದೇಶ ಆಟಗಾರ್ತಿಯರು ಭಾರತದ ಸಂಘಟಿತ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಅನುಜಾ ಪಾಟೀಲ್ ಮತ್ತು ಪೂನಂ ಯಾದವ್ ಅವರು ತಲಾ ವಿಕೆಟ್ ಪಡೆಯುವ ಮೂಲಕ ಬಾಂಗ್ಲಾ ಆಟಗಾರ್ತಿಯರ ಮೇಲೆ ಹೆತ್ತಡ ಹೆಚ್ಚಾಗುವಂತೆ ಮಾಡಿದರು. ಅಂತಿಮವಾಗಿ ನಿಗದಿತ 20 ಓವರ್ ಗಳಲ್ಲಿ ಬಾಂಗ್ಲಾದೇಶ ತಂಡ 5 ವಿಕೆಟ್ ನಷ್ಟಕ್ಕೆ 91 ರನ್ ಗಳನ್ನಷ್ಟೇ ಸೇರಿಸಲು ಶಕ್ತವಾಯಿತು.
ಆ ಮೂಲಕ ಭಾರತದ ವಿರುದ್ಧ ಬರೊಬ್ಬರಿ 72 ರನ್ ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದ ಜಯದೊಂದಿಗೆ ಭಾರತ 2 ಅಂಕಗಳಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 40 ರನ್ ಸಿಡಿಸಿ ಭಾರತ ಬೃಹತ್ ಮೊತ್ತಕ್ಕೆ ಕಾರಣರಾದ ಹರ್ಪೀತ್ ಕೌರ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


