ದ.ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ವನಿತೆಯರಿಗೆ ಜಯ
ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ಮಹಿಳಾ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 6 ವಿಕೆಟ್..

ನಾಗ್ಪುರ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ಮಹಿಳಾ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ನಾಗ್ಪುರದಲ್ಲಿ ನಡೆದ ಮಹಿಳಾ ವಿಭಾಗದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ 6ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್ ಗಳಲ್ಲಿ ವ್ಯಾನ್ ನೀಕೆರ್ಕ್ (45 ರನ್) ಮತ್ತು ಚೆಟ್ಟಿ (34 ರನ್) ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 6ವಿಕೆಟ್‌ಗೆ 102ರನ್ ಪೇರಿಸಿತು.
ಆಸ್ಟ್ರೇಲಿಯಾ ಪರ ಚೀಟ್ಲ್ ಮತ್ತು ಪೆರ್ರಿ ತಲಾ 2 ವಿಕೆಟ್ ಪಡೆದರೆ, ಬೀಮ್ಸ್ 1 ವಿಕೆಟ್ ಕಬಳಿಸಿದರು. ದಕ್ಷಿಣ ಆಫ್ರಿಕಾ ನೀಡಿದ 103 ರನ್ ಗಳ ಸವಾಲನ್ನು ಬೆನ್ನುಹತ್ತಿದ ಆಸ್ಟ್ರೇಲಿಯಾ ತಂಡ ಬ್ಲ್ಯಾಕ್ ವೆಲ್ (42 ರನ್ ) ಮತ್ತು ಲ್ಯಾನ್ನಿಂಗ್ (30 ರನ್) ಅವರ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್‌ಗೆ 105ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಆಲ್ ರೌಂಡ್ ಪ್ರದರ್ಶನ ನೀಡಿದ ಲ್ಯಾನ್ನಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


