ಕ್ರಿಕೆಟ್

ಐರ್ಲೆಂಡ್ ವಿರುದ್ಧ ಗೆದ್ದ ಕಿವೀಸ್ ಮಹಿಳೆಯರು

ಶುಕ್ರವಾರ ಐರ್ಲೆಂಡ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 93 ರನ್ ಗಳ ಭರ್ಜರಿ ಜಯಗಳಿಸಿದೆ...

ಐರ್ಲೆಂಡ್ ವಿರುದ್ಧ ಗೆದ್ದ ಕಿವೀಸ್ ಮಹಿಳೆಯರು
ಗೆಲುವಿನ ಸಂಭ್ರಮದಲ್ಲಿ ಕಿವೀಸ್ ಮಹಿಳಾ ಪಡೆ (ಚಿತ್ರಕೃಪೆ: ಕ್ರಿಕ್ ಇನ್ಫೋ)
Published On :

ಮೊಹಾಲಿ: ಶುಕ್ರವಾರ ಐರ್ಲೆಂಡ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 93 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ, ಬೇಟ್ಸ್ ಮತ್ತು ಸೋಫಿಯಾ ಡಿವೈನ್(47) ಜೋಡಿಯ ಬಿರುಸಿನ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 177 ರನ್  ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಕಿವೀಸ್ ನೀಡಿದ 178 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿದ ಐರ್ಲೆಂಡ್ ವನಿತೆಯರು 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 84  ರನ್ ಗಳನ್ನಷ್ಟೇ ಗಳಿಸಲು ಶಕ್ತವಾದರು. ಆ ಮೂಲಕ ಕಿವೀಸ್ ಎದುರು ಬರೊಬ್ಬರಿ 93 ರನ್ ಗಳ ಹೀನಾಯ ಸೋಲು ಅನುಭವಿಸಿದರು.

ಪ್ರಸಕ್ತ ಜಯದಿಂದ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡ ತನ್ನ ಉಪಾಂತ್ಯ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದೆ. ಉತ್ತಮ ಪ್ರದರ್ಶನ ನೀಡಿದ ಬೇಟ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.