ಕ್ರಿಕೆಟ್

ಟಿ20ವಿಶ್ವಕಪ್ ಮುಗಿದ ನಂತರ ನಾಯಕ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಫ್ರೀದಿ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯ ಮುಗಿದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನ ಸ್ಥಾನದಿಂದ ಶಾಹೀದ್ ಅಫ್ರೀದಿ ಅವರನ್ನು ಕೈ...

ಟಿ20ವಿಶ್ವಕಪ್ ಮುಗಿದ ನಂತರ ನಾಯಕ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಫ್ರೀದಿ
ಶಾಹೀದ್ ಅಫ್ರೀದಿ
Published On :
ಕರಾಚಿ: ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯ ಮುಗಿದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನ ಸ್ಥಾನದಿಂದ ಶಾಹೀದ್ ಅಫ್ರೀದಿ ಅವರನ್ನು ಕೈ ಬಿಡಲಾಗುವುದು ಎಂದು ಪಿಸಿಬಿ (ಪಾಕಿಸ್ತಾನ್ ಕ್ರಿಕೆಟ್ ಮಂಡಳಿ) ಅಧ್ಯಕ್ಷ ಶಹರ್ಯಾರ್ ಖಾನ್ ಸೋಮವಾರ ತಿಳಿಸಿದ್ದಾರೆ.
ಲಾಹೋರ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಹರ್ಯಾರ್ ಖಾನ್, ವಿಶ್ವಕಪ್ ನಂತರ ನಾಯಕ ಸ್ಥಾನದಿಂದ ಕೆಳಗಿಳಿಯಬೇಕು ಎಂಬುದರ ಬಗ್ಗೆ ಪಿಸಿಬಿ ಮತ್ತು ಅಫ್ರೀದಿ ನಡುವೆ ಮಾತುಕತೆಗಳು ನಡೆದಿವೆ.  
ವಿಶ್ವಕಪ್‌ನ ವರೆಗೆ ಮಾತ್ರ ಅಫ್ರೀದಿ ನಾಯಕತ್ವ ವಹಿಸಲಿದ್ದಾರೆ. ಅದು ಮುಗಿದ ನಂತರ ಅವರಾಗಿಯೇ ಆ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಒಂದು ವೇಳೆ ಅವರು ಮನಸ್ಸು ಬದಲಿಸಿ ನಾಯಕನಾಗಿ ಮುಂದುವರಿಯಲು ಇಚ್ಛಿಸಿದರೆ ಅವರನ್ನು ಟೀಂ ನಲ್ಲಿ ಇರಿಸಬೇಕೋ, ಬೇಡವೋ ಎಂಬುದರ ಬಗ್ಗೆ ನಾವು ತೀರ್ಮಾನಿಸುತ್ತೇವೆ ಎಂದು ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.