ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೇಳಿದ ಮುಶ್ಫಿಕರ್ ರಹೀಮ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ...

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.
ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿರುವ ಮುಶ್ಫಿಕರ್ ಭಾರತದ ಎದುರು ಬಾಂಗ್ಲಾದೇಶದ ಸೋಲಿಗೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದಾರೆ. ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 147 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ ಗಳಲ್ಲಿ 146 ರನ್ ಗಳಿಸಿ 1 ಅಂತರದಿಂದ ರೋಚಕ ಸೋಲು ಕಂಡಿತ್ತು.
ಪಂದ್ಯದ ಅಂತಿಮ ಓವರ್ ನಲ್ಲಿ ಸತತ 2 ಬೌಂಡರಿ ಸಿಡಿಸಿ ಬಾಂಗ್ಲಾ ತಂಡವನ್ನು ಬಹುತೇಕ ಗೆಲುವಿನ ಸನಿಹಕ್ಕೆ ತಂದಿದ್ದ ಮುಶ್ಫಿಕರ್ ರಹೀಮ್ ಆಗಲೇ ಗೆಲುವಿನ ಸಂಭ್ರಮಾಚರಣೆ ಮಾಡಿದ್ದರು. ಆದರೆ ನಾಲ್ಕನೇ ಎಸೆತದಲ್ಲಿ ಅನಗತ್ಯ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲುವ ಮೂಲಕ ಬಾಂಗ್ಲಾದೇಶದ ಸೋಲಿಗೆ ಪರೋಕ್ಷ ಕಾರಣರಾಗಿದ್ದರು. ಇದೀಗ ತಮ್ಮ ತಪ್ಪಿನ ಅರಿವಾಗಿ ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


