ಕ್ರಿಕೆಟ್

ಗಾಯಗೊಂಡ ಯುವಿ; ಮನೀಷ್ ಪಾಂಡೆಗೆ ಬುಲಾವ್

ಭಾನುವಾರ ರಾತ್ರಿ ಮೊಹಾಲಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಗುರಿಯಾಗಿ ಗಾಯಗೊಂಡಿದ್ದ ಭಾರತ ತಂಡ..

ಗಾಯಗೊಂಡ ಯುವಿ; ಮನೀಷ್ ಪಾಂಡೆಗೆ ಬುಲಾವ್
ಗಾಯಗೊಂಡ ಯುವಿ ಹಾಗೂ ಮನೀಷ್ ಪಾಂಡೆ (ಸಂಗ್ರಹ ಚಿತ್ರ)
Published On :

ಮೊಹಾಲಿ: ಭಾನುವಾರ ರಾತ್ರಿ ಮೊಹಾಲಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಗುರಿಯಾಗಿ ಗಾಯಗೊಂಡಿದ್ದ ಭಾರತ ತಂಡದ ಸ್ಫೋಟಕ ಬ್ಯಾಟ್ಸಮನ್ ಉಳಿದ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಗಳಿವೆ.

ಟೀಂ ಇಂಡಿಯಾ ಮೂಲಗಳ ಪ್ರಕಾರ ಯುವರಾಜ್ ಸಿಂಗ್ ಆಸ್ಟ್ರೇಲಿಯಾ ತಂಡದ ವಿರುದ್ಧದ ಮೊಹಾಲಿ ಪಂದ್ಯದಲ್ಲಿ ಗಾಯಗೊಂಡಿದ್ದರು. ಈಗಾಗಲೇ ಟೀಂ ಮ್ಯಾನೇಜ್ ಮೆಂಟ್ ಯುವಿ ಅವರ ಕಾಲಿನ ಎಂಅರ್ ಸ್ಕ್ಯಾನಿಂಗ್ ಮಾಡಿಸಿದ್ದು, ಮುಂದಿನ ಪಂದ್ಯಗಳಿಗೆ ಯುವಿ ಅಲಭ್ಯರಾಗುವ ಸಾಧ್ಯತೆಗಳಿವೆ. ಭಾನುವಾರದ ಪಂದ್ಯದಲ್ಲಿ ಯುವರಾಜ್ ಸಿಂಗ್ 5 ರನ್‌ಗಳಿಸಿದ್ದ ವೇಳೆ ಗಾಯಗೊಂಡಿದ್ದರು. ಇದರ ನಡುವೆಯೂ ಯುವರಾಜ್ ಕೆಲಕಾಲ ಬ್ಯಾಟಿಂಗ್ ನಡೆಸಿದ್ದರು.

ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕದ ಸ್ಫೋಟಕ ಬ್ಯಾಟ್ಸ್‌ಮನ್ ಮನೀಷ್ ಪಾಂಡೆಯನ್ನು ಮೀಸಲು ಆಟಗಾರನಾಗಿ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಮನೀಷ್ ಪಾಂಡೆಗೆ ಬಿಸಿಸಿಐ ಬುಲಾವ್ ನೀಡಿದ್ದು, ಮುಂಬೈನಲ್ಲಿರುವ ಭಾರತ ತಂಡವನ್ನು ಕೂಡಿಕೊಳ್ಳುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ಪ್ರವಾಸದ ವೇಳೆ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದ ಪಾಂಡೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರಮುಖ ಆಕಾಂಕ್ಷಿಯಾಗಿದ್ದರು. ಐಪಿಎಲ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಶ್ರೇಯಕ್ಕೂ ಈ ಹಿಂದೆ ಪಾಂಡೆ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.