ಕ್ರಿಕೆಟ್

ವಿಶ್ವಕಪ್ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಫೀಲ್ಡಿಂಗ್ ಆಯ್ಕೆ

ವಿಶ್ವಕಪ್ ಟಿ20 ಪಂದ್ಯಾವಳಿಯ ಮೊದಲ ಸೆಮಿ ಫೈನಲ್ ಪಂದ್ಯ ದೆಹಲಿಯ ಐತಿಹಾಸಿಕ ಫಿರೋಜಾ ಷಾ ಕೋಟ್ಲಾ ಮೈದಾನದಲ್ಲಿ ಆರಂಭವಾಗಿದ್ದು..

ವಿಶ್ವಕಪ್ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಫೀಲ್ಡಿಂಗ್ ಆಯ್ಕೆ
Image Credit: Getty Images
Published On :
ನವದೆಹಲಿ: ವಿಶ್ವಕಪ್ ಟಿ20 ಪಂದ್ಯಾವಳಿಯ ಮೊದಲ ಸೆಮಿ ಫೈನಲ್ ಪಂದ್ಯ ದೆಹಲಿಯ ಐತಿಹಾಸಿಕ ಫಿರೋಜಾ ಷಾ ಕೋಟ್ಲಾ ಮೈದಾನದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಲೀಗ್‌ ಹಂತದ ಎಲ್ಲ ಪಂದ್ಯಗಳನ್ನು ಗೆದ್ದಿರುವ ನ್ಯೂಜಿ ಲ್ಯಾಂಡ್‌ ಸೆಮಿ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದ್ದು, ಚೊಚ್ಚಲ ವಿಶ್ವಕಪ್ ಟಿ20 ಗೆಲ್ಲುವ ವಿಶ್ವಾಸದಲ್ಲಿದೆ.

ಆರಂಭಿಕ ಪಂದ್ಯದಲ್ಲೇ ಆತಿಥೇಯ ಭಾರತವನ್ನು ಅಲ್ಪ ಮೊತ್ತಕ್ಕೆ ಉದುರಿಸಿ ಜಯಭೇರಿ ಮೊಳಗಿಸಿದ್ದು 'ಬ್ಲ್ಯಾಕ್‌ ಕ್ಯಾಪ್ಸ್‌'ಗಳ ಮಹಾನ್‌ ಸಾಹಸ. ಇದು ಕಿವೀಸ್‌ನ ಉಳಿದೆಲ್ಲ ಗೆಲುವುಗಳಿಗೂ ಟಾನಿಕ್‌ ಆಗಿ ಪರಿಣಮಿಸಿತ್ತು.

2010ರ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಹೋಲಿಸಿದರೆ, ನ್ಯೂಜಿಲೆಂಡ್ ಫೇವರಿಟ್ ತಂಡವಾಗಿ ಗೋಚರಿಸಿದೆ. ಈವರೆಗೂ 13 ಟಿ20 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ನ್ಯೂಜಿಲೆಂಡ್ 4ರಲ್ಲಿ ಗೆದ್ದಿದ್ದರೆ, ಇಂಗ್ಲೆಂಡ್ 8ರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ರದ್ದುಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.