ಆರ್ಸಿಬಿ ವಿರುದ್ಧ 1 ರನ್ ಸೋಲು; ಅದೃಷ್ಟ ನಮ್ಮ ಕಡೆಗಿಲ್ಲ: ಪ್ರೀತಿ ಝಿಂಟಾ
ನಿನ್ನೆ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್...

ನವದೆಹಲಿ: ನಿನ್ನೆ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕೆ ಬಾಲಿವುಡ್ ನಟಿ ಪ್ರೀತಿ ಝಿಂಟಾ ಬೇಸರ ವ್ಯಕ್ತಪಡಿಸಿದ್ದಾರೆ.
ತಂಡದ ನಾಯಕ ಮುರಳಿ ವಿಜಯ್ ಅವರ ಅದ್ಭುತ ಬ್ಯಾಟಿಂಗ್ ಹೊರತು ನಮ್ಮ ತಂಡ ಆರ್ಸಿಬಿ ವಿರುದ್ಧ 1 ರನ್ ನಿಂದ ಸೋಲು ಅನುಭವಿಸಿದ್ದು, 'ಅದೃಷ್ಟ ನಮ್ಮ ಕಡೆಗಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ.
ಆರ್ಸಿಬಿ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಆರ್ಸಿಬಿ ಪರ ಎಬಿಡಿ ವಿಲಿಯರ್ಸ್ ಅದ್ಭುತ ಬ್ಯಾಟಿಂಗ್ ನಿಂದಾಗಿ ತಂಡ 175 ರನ್ ಗಳನ್ನು ಕಲೆ ಹಾಕಿತ್ತು. 176 ರನ್ ಗಳ ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮುರಳಿ ವಿಜಯ್ 57 ಎಸೆತಗಳಲ್ಲಿ ಭರ್ಜರಿ 89 ರನ್ ಗಳಿಸಿದ್ದರು. ಇದರ ಹೊರತಾಗಿಯೂ ತಂಡ 1 ರನ್ ನಿಂದ ವಿರೋಚಿತ ಸೋಲು ಅನುಭವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


