ಸದ್ಯ ಕೊಹ್ಲಿಗೆ ಎಲ್ಲ ಮಾದರಿಯ ನಾಯಕತ್ವ ಬೇಡ: ಸುನಿಲ್ ಗಾವಸ್ಕರ್
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಏಕಾಏಕಿ ಎಲ್ಲ ಮಾದರಿಯ ನಾಯಕತ್ವ ಬೇಡ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ...

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಏಕಾಏಕಿ ಎಲ್ಲ ಮಾದರಿಯ ನಾಯಕತ್ವ ಬೇಡ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ನಾಯಕತ್ವದ ವಿರುದ್ಧ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅಸಮಾಧಾನ ವ್ಯಕ್ತಪಡಿಸಿದ್ದು, ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸುವುದು ಸೂಕ್ತ ಎಂಬ ಮಾತುಗಳನ್ನಾಡಿದ್ದರು.
ಕೊಹ್ಲಿ ನಾಯಕತ್ವ ಕುರಿತಾಗಿ ಪ್ರತಿಕ್ರಿಯಿಸಿರುವ ಗಾವಸ್ಕರ್ ಕೊಹ್ಲಿಗೆ ಇಗಲೇ ಎಲ್ಲಾ ಮಾದರಿಯ ನಾಯಕತ್ವ ವಹಿಸುವುದು ಬೇಡ. ಅವರಿಗೆ ನಾಯಕರಾಗಿ ಬೆಳೆಯಲು ಅವಕಾಶ ನೀಡಬೇಕು . 2019ರ ವಿಶ್ವಕಪ್ ಬಹಳ ದೂರವಿರುವುದರಿಂದ ನಾವು ಗಡಿಬಿಡಿ ಮಾಡಬಾರದು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗಂಗೂಲಿ, 2019ರಲ್ಲಿ ನಡೆಯುವ ಐಸಿಸಿ ವಿಶ್ವಕಪ್ ನಲ್ಲಿ ತಂಡದ ನಾಯಕತ್ವ ವಹಿಸಲು ಧೋನಿಗೆ ಸಾಧ್ಯವಾಗುವುದೇ?. ಧೋನಿಗೆ ನಾಯಕತ್ವ ಕೌಶಲ್ಯದ ಬಗ್ಗೆ ನನಗೇನು ಅನುಮಾನವಿಲ್ಲ. ಆದರೆ ನಾಯಕತ್ವದ ಹೊಣೆಯನ್ನು ಇನ್ನೊಬ್ಬ ಕಿರಿಯನಿಗೆ ದಾಟಿಸುವ ಸಮಯ ಬಂದಿದೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


