ಐಸಿಸಿ ಕ್ರಿಕೆಟ್ ಸಮಿತಿ ಅಧ್ಯಕ್ಷರಾಗಿ ಕುಂಬ್ಳೆ ಮುಂದುವರಿಕೆ, ದ್ರಾವಿಡ್‌ಗೆ ಸದಸ್ಯತ್ವ
ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಯವರನ್ನು ಎರಡನೇ ಬಾರಿ ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅದೇ ವೇಳೆ ರಾಹುಲ್...

Published On :
ದುಬೈ: ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಯವರನ್ನು ಎರಡನೇ ಬಾರಿ ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅದೇ ವೇಳೆ ರಾಹುಲ್ ದ್ರಾವಿಡ್ ಅವರನ್ನು ಸಮಿತಿಯ ಪ್ರಮುಖ ತಂಡದ ಸದಸ್ಯರನ್ನಾಗಿ ಮಾಡಲಾಗಿದೆ.
ಭಾರತದ ಕ್ರಿಕೆಟ್ ತಂಡದಲ್ಲಿ ಅತೀ ಹೆಚ್ಚು ವಿಕೆಟ್ ಗಳಿಸಿರುವ ಕುಂಬ್ಳೆ ಅವರನ್ನು 2012ರಲ್ಲಿ ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಎರಡನೇ ಬಾರಿಯೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವಂತೆ ಸಮಿತಿ ತೀರ್ಮಾನ ಕೈಗೊಂಡಿದ್ದು, 2018ರ ವರೆಗೆ ಕುಂಬ್ಳೆ ಪ್ರಸ್ತುತ ಪದವಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಏತನ್ಮಧ್ಯೆ, ಐಸಿಸಿ ಕ್ರಿಕೆಟ್ ಕಮಿಟಿ ಸದಸ್ಯರಾಗಿ ಮಾಜಿ ಕ್ರಿಕೆಟಿರ ರಾಹುಲ್ ದ್ರಾವಿಡ್ ಮತ್ತು ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ನೇಮಕ ಮಾಡಲಾಗಿದೆ.
ದ್ರಾವಿಡ್ ಮತ್ತು ಜಯವರ್ಧನೆ 1996 ರಿಂದ 2015ರ ಅವಧಿಯಲ್ಲಿ 1, 161 ಅಂತಾರಾಷ್ಟ್ರೀಯ ಮ್ಯಾಚ್‌ಗಳನ್ನಾಡಿದ್ದಾರೆ. ಈ ಸದಸ್ಯರ ಸದಸ್ಯತ್ವದ ಕಾಲಾವಧಿಯೂ ಮೂರು ವರ್ಷವಾಗಿದೆ.
ಮೇ 31 ಮತ್ತು ಜೂನ್ 1 ರಂದು ಇಡಿನ್‌ಬರ್ಗ್, ಸ್ಕಾಟ್‌ಲ್ಯಾಂಡ್‌ನಲ್ಲಿ ಐಸಿಸಿ ವಾರ್ಷಿಕ ಸಮ್ಮೇಳನ ನಡೆಯಲಿದೆ ಎಂದು ಐಸಿಸಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


