ಹಲವು ದಾಖಲೆ ಮುರಿದು, ಹೊಸ ವಿಶ್ವ ದಾಖಲೆ ಮಾಡಿದ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹಲವು ವಿಶ್ವ ದಾಖಲೆಗಳನ್ನು ಮಾಡಿದ್ದಾರೆ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹಲವು ವಿಶ್ವದಾಖಲೆಗಳನ್ನು ಮಾಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 4 ಸಾವಿರ ರನ್ ಪೂರೈಸಿದ ಏಕೈಕ ಬ್ಯಾಟ್ಸ್ ಮನ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ಐಪಿಎಲ್ ನಲ್ಲಿ 113 ಇನ್ನಿಂಗ್ಸ್ ನಲ್ಲಿ ಈ ದಾಖಲೆ ಮಾಡಿದ್ದಾರೆ. ಗುಜರಾತ್ ಲಯನ್ಸ್ ತಂಡದ ನಾಯಕ ಸುರೇಶ್ ರೈನಾ 3985 ರನ್ ಗಳನ್ನು ಗಳಿಸಿದ್ದು, 4 ಸಾವಿರ ರನ್ ಗಳಿಗೆ ಇನ್ನು ಕೇವಲ 15 ರನ್ ಸಿಡಿಸಬೇಕಿತ್ತು.
ಐಪಿಎಲ್ ಟೂರ್ನಿಯೊಂದರಲ್ಲಿ 4 ಶತಕ ಸಿಡಿಸಿ ಅಗ್ರಮಾನ್ಯ ಬ್ಯಾಟ್ಸ್ ಮನ್ ಎನಿಸಿದ್ದಾರೆ. ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ಎಸೆತೆಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 49 ಎಸೆತಗಳಲ್ಲಿ 113 ರನ್ ಗಳಿಸಿದ್ದಾಗ ಬಿರುಸಿನ ಹೊಡೆತ ಹೊಡೆಯಲು ಹೋಗಿ ಔಟಾದರು.
ಕಿಂಗ್ಸ್ ಇಲೆವೆನ್ ವಿರುದ್ಧ 50 ಎಸೆತಗಳಲ್ಲಿ 113 ರನ್ ಸಿಡಿಸುವ ಮೂಲಕ ಕೊಹ್ಲಿ ಸ್ಟ್ರೈಕ್ ರೇಟ್ 226 ರಷ್ಟಿದೆ. ಟಿ20 ಯಲ್ಲಿ ಇದೇ ಮೊದಲ ಬಾರಿಗೆ ಅವರ ಸ್ಟ್ರೈಕ್ ರೇಟ್ 200ರ ಗಡಿ ದಾಟಿದೆ.
ವಿರಾಟ್ ಕೊಹ್ಲಿ ಟಿ20 ಪಂದ್ಯಗಳಲ್ಲಿ 11 ಬಾರಿ 75 ರನ್ ಗಿಂತ ಅಧಿಕ ರನ್ ಗಳಿಸಿದ ಆಟಗಾರ. ಇನ್ನು 2011ರಲ್ಲಿ ಆರ್ಸಿಬಿ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ 10 ಬಾರಿ 75 ರನ್ ಗಿಂತಲೂ ಅಧಿಕ ರನ್ ಸಿಡಿಸಿದ ಸಾಧನೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


