ಬಿಸಿಸಿಐ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧ ಆಯ್ಕೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರು ಭಾನುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....

Published On :
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರು ಭಾನುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಮುಂಬೈಯಲ್ಲಿ ನಡೆದ ಬಿಸಿಸಿಐನ ವಿಶೇಷ ಮಹಾಸಭೆ(ಎಸ್‌ಜಿಎಂ)ಯಲ್ಲಿ ಬಿಸಿಸಿಐ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಅನುರಾಗ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ಸಂಸದರಾಗಿರುವ ಅನುರಾಗ್ ಠಾಕೂರ್ ಅವರಿಗೆ ಪೂರ್ವವಲಯ ಸದಸ್ಯ ರಾಜ್ಯಗಳಾದ ಬಂಗಾಳ, ಅಸ್ಸಾಂ, ಜಾರ್ಖಂಡ್, ತ್ರಿಪುರಾ ಹಾಗೂ ನ್ಯಾಷನಲ್ ಕ್ರಿಕೆಟ್ ಕ್ಲಬ್ ಸಂಪೂರ್ಣ ಬೆಂಬಲ ನೀಡಿವೆ.
ಬಿಸಿಸಿಐ ನಿಯಮದ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಯಾವು ದಾದರೂ ಒಂದು ಘಟಕ ನಾಮ ನಿರ್ದೇಶನ ಮಾಡಬೇಕು. ಆದರೆ ಪೂರ್ವ ವಲಯದ ಆರೂ ಕ್ರಿಕೆಟ್ ಸಂಸ್ಥೆಗಳು ಅನುರಾಗ್ ಅವರನ್ನು ಬೆಂಬಲಿಸಿರುವ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಮೊದಲು ಅಧ್ಯಕ್ಷ ಹುದ್ದೆ ಯಲ್ಲಿದ್ದ ಶಶಾಂಕ್ ಮನೋಹರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಮುಖ್ಯಸ್ಥರಾಗಿ ಸ್ವತಂತ್ರ ವಾಗಿ ಸ್ವರ್ಧಿಸಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಈ ತಿಂಗಳ ಆರಂಭದಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


