ತಂಡದ ಸಂಘಟಿತ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡೇವಿಡ್ ವಾರ್ನರ್
ಗೆಲುವಿನ ಸಂಪೂರ್ಣ ಶ್ರೇಯ ತಂಡದ ಬೌಲರ್ ಗಳಿಗೆ ಸಲ್ಲಬೇಕು. ಒತ್ತಡದ ಸಂದರ್ಭವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದರು ಎಂದು ಸನ್ ರೈಸರ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಹೇಳಿದ್ದಾರೆ...

ಬೆಂಗಳೂರು: ಗೆಲುವಿನ ಸಂಪೂರ್ಣ ಶ್ರೇಯ ತಂಡದ ಬೌಲರ್ ಗಳಿಗೆ ಸಲ್ಲಬೇಕು. ಒತ್ತಡದ ಸಂದರ್ಭವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದರು ಎಂದು ಸನ್ ರೈಸರ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಹೇಳಿದ್ದಾರೆ.
ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡೇವಿಡ್ ವಾರ್ನರ್ "ತಂಡದ ಸಂಘಟಿತ ಹೋರಾಟದ ಫಲವಾಗಿ ಬೆಂಗಳೂರು ತಂಡದ ವಿರುದ್ಧ ಗೆದ್ದು ಐಪಿಎಲ್ ಚಾಂಪಿಯನ್ ಆಗಲು ಸಾಧ್ಯವಾಯಿತು. ಎಲ್ಲಾ ಆಟಗಾರರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ಇಂಥಹ ತಂಡದ ನಾಯಕತ್ವ ವಹಿಸಿಕೊಳ್ಳುವ ಭಾಗ್ಯ ನನಗೆ ಸಿಕ್ಕಿರುವುದು ನನ್ನ ಸೌಭಾಗ್ಯ. ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿಯೂ ಅತ್ಯುತ್ತಮ ಆಟ ಪ್ರದರ್ಶಿಸಿ ಫೈನಲ್ ಪ್ರವೇಶಿಸಿದ್ದೇವೆನ್ನುವ ಸಮಾಧಾನ ನಮಗಿದೆ. ತಂಡದ ಈ ಸಾಧನೆಗಾಗಿ ನಾವು ಸಾಕಷ್ಟು ಶ್ರಮಿಸಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಎದುರಾಳಿ ತಂಡದ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಾರ್ನರ್ "ವಿರಾಟ್ ಕೊಹ್ಲಿ ಒಬ್ಬ ಅತ್ಯುತ್ತಮ ನಾಯಕ. ಇಂತಹ ಆಟಗಾರನನ್ನು ಎದುರಿಸುವಾಗ ನಮ್ಮ ಸವಾಲು 200 ದಾಟಿರಬೇಕೆಂದುಕೊಂಡಿದ್ದೆವು. ಅಂತೆಯೇ ಉತ್ತಮ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವನ್ನು ನೀಡಿದೆವು. ಇದರ ಪ್ರತಿಫಲವೇ ಚಾಂಪಿಯನ್ಪಟ್ಟ ನಮ್ಮದಾಗಿದೆ ಎಂದು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ 8 ರನ್ ಗೆಲುವು ಸಾಧಿಸಿ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


