ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಶ್ರೀಲಂಕಾ ಆಟಗಾರ ನುವಾನ್ ಕುಲಸೇಕರ
ಶ್ರೀಲಂಕಾ ಕ್ರಿಕೆಟ್ ತಂಡದ ವೇಗದ ಬೌಲರ್ ನುವಾನ್ ಕುಲಸೇಕರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ವೇಗದ ಬೌಲರ್ ನುವಾನ್ ಕುಲಸೇಕರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
"ತಕ್ಷಣದಿಂದಲೇ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ನುವಾನ್ ಕುಲಸೇಕರ ಹೇಳಿರುವುದರ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಸಾಕಷ್ಟು ಆಲೋಚನೆ ಬಳಿಕ ಈ ನಿರ್ಧಾರ ಕೈಗೊಂಡಿದ್ದು ಇದರಿಂದಾಗಿ ಏಕದಿನ ಪಂದ್ಯ ಹಾಗೂ ಐಪಿಎಲ್ ಪಂದ್ಯಗಳಿಗೆ ಸಹಕಾರಿಯಾಗಲಿದೆ ಎಂದು ಕುಲಸೇಕರ ತಿಳಿಸಿದ್ದಾರೆ.
2005 ರಲ್ಲಿ ಟೆಸ್ಟ್ ಕ್ರಿಕೆಟ್ ಪ್ರಾರಂಭಿಸಿದ ಕುಲಸೇಕರ ಈ ವರೆಗೂ 21 ಪಂದ್ಯಗಳನ್ನಾಡಿದ್ದು 48 ವಿಕೆಟ್ ಗಳನ್ನು ಪಡೆದಿದ್ದಾರೆ. ಆದರೆ ಏಕದಿನ ಹಾಗೂ ಟಿ 20 ಬೌಲಿಂಗ್ ಮಾಡಿದಷ್ಟು ಆಕ್ರಮಣಕಾರಿಯಾಗಿ ಟೆಸ್ಟ್ ಪಂದ್ಯಗಳಲ್ಲಿ ಮಾಡದೇ ಇರುವುದು ಟೆಸ್ಟ್ ಫಾರ್ಮೆಟ್ ನಲ್ಲಿ ಕುಲಸೇಕರ ಅವರ ವೈಫಲ್ಯವಾಗಿದೆ. 2014 ರಲ್ಲಿ ಲಾರ್ಡ್ಸ್ ನಲ್ಲಿ ನಡೆದ ಇಂಗ್ಲೆಡ್- ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ಕುಲಸೇಕರ ಅವರ ಕೊನೆಯ ಪಂದ್ಯವಾಗಿತ್ತು. 173 ಏಕದಿನ ಪಂದ್ಯಗಳನ್ನು ಆಡಿರುವ ಕುಲಸೇಕರ 2009 ರ ಸಾಲಿನಲ್ಲಿ ನಂ.1 ಬೌಲರ್ ಆಗಿ ಗುರುತಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


