ಕ್ರಿಕೆಟ್

ಇಂಗ್ಲೆಂಡ್ ಭಾರತ ಪ್ರವಾಸ: ಟೆಸ್ಟ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ

ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು, ಟೀಂ ಇಂಡಿಯಾದ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ...

ಇಂಗ್ಲೆಂಡ್ ಭಾರತ ಪ್ರವಾಸ: ಟೆಸ್ಟ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ
ಟೀಂ ಇಂಡಿಯಾ
Published On :
ನವದೆಹಲಿ: ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು, ಟೀಂ ಇಂಡಿಯಾದ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 
ನವೆಂಬರ್ 9 ರಿಂದ ಆರಂಭವಾಗಲಿರುವ 5 ಟೆಸ್ಟ್ ಪಂದ್ಯಗಳ ಸರಣಿಯ ಮೊದಲೆರೆಡು ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಹಾರ್ದಿಕ್ ಪಾಂಡ್ಯಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ದೇಶಿಯ ಕ್ರಿಕೆಟ್ ನಲ್ಲಿ ಉತ್ತಮವಾಗಿ ಆಡುತ್ತಿರುವ ಗೌತಮ್ ಗಂಭೀರ್ ಈ ಹಿಂದೆ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಒಂದು ಪಂದ್ಯದಲ್ಲಿ ಆಡಿ ಅರ್ಧ ಶತಕ ಸಿಡಿಸಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು. ಇದೀಗ ಆಯ್ಕೆ ಸಮಿತಿ ಗೌತಮ್ ಗಂಭೀರ್ ಗೆ ಮತ್ತೊಂದು ಅವಕಾಶ ನೀಡಿದೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಕರ್ನಾಟಕ ಆಟಗಾರ ಕೆಎಲ್ ರಾಹುಲ್ ಇಂಗ್ಲೆಂಡ್ ಸರಣಿಯಿಂದ ದೂರ ಸರಿದಿದ್ದಾರೆ. 
ಟೀಂ ಇಂಡಿಯಾ ಟೆಸ್ಟ್ ಆಟಗಾರರ ತಂಡ
ತಂಡದಲ್ಲಿ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್, ಮುರಳಿ ವಿಜಯ್, ವೃದ್ಧಿಮಾನ್ ಸಾಹಾ, ಅಜಿಂಕ್ಯಾ ರಹಾನೆ, ಚೇತೇಶ್ವರ ಪೂಜಾರ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಮೊಹಮ್ಮದ್ ಶಮಿ, ಕರುಣ್ ನಾಯರ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯಾ, ಇಶಾಂತ್ ಶರ್ಮಾ, ಜಯಂತ್ ಯಾದವ್ ಸ್ಥಾನ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.