ರಣಜಿ ಟ್ರೋಫಿ: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಕರ್ನಾಟಕ
ದೆಹಲಿ ಹಾಗೂ ಅಸ್ಸಾಂ ವಿರುದ್ಧ ಭರ್ಜರಿ ಜಯಗಳಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಕರ್ನಾಟಕ ತಂಡ ವಿದರ್ಭ ವಿರುದ್ಧ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡುವ ಹಂಬಲದಲ್ಲಿದೆ...

ವಡೋದರ: ದೆಹಲಿ ಹಾಗೂ ಅಸ್ಸಾಂ ವಿರುದ್ಧ ಭರ್ಜರಿ ಜಯಗಳಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಕರ್ನಾಟಕ ತಂಡ ವಿದರ್ಭ ವಿರುದ್ಧ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡುವ ಹಂಬಲದಲ್ಲಿದೆ.
ರಣಜಿ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ಆರಂಭ ಕಂಡಿರುವ ಕರ್ನಾಟಕ ತಂಡ ಇಂದು ವಿದರ್ಭ ವಿರುದ್ಧ ಸೆಣಸಲಿದೆ. 8 ಬಾರಿ ರಣಜಿ ಚಾಂಪಿಯನ್ ಆಗಿರುವ ಕರ್ನಾಟಕ ತಂಡ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಜಯಗಳಿಸಿ ಮತ್ತೊಂದು ಪಂದ್ಯದಲ್ಲಿ ಡ್ರಾ ಸಾಧಿಸಿರುವ ಕರ್ನಾಟಕ ತಂಡ 17 ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.
ವಿದರ್ಭ ಕರ್ನಾಟಕ ತಂಡಗಳ ನಡುವಿನ ಪಂದ್ಯ ಮೋತಿಬಾಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಜಯ್ ಕುಮಾರ್ ಸಾರಥ್ಯದಲ್ಲಿ ತಂಡ ಟೂರ್ನಿಯಲ್ಲಿ ಇದುವರೆಗೂ ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


