ಪ್ರಥಮ ಟೆಸ್ಟ್: 537 ರನ್ ಬೃಹತ್ ಮೊತ್ತಕ್ಕೆ ಇಂಗ್ಲೆಂಡ್ ಆಲೌಟ್
ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದು...

Published On :
ರಾಜ್ಕೋಟ್: ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದು, 537 ರನ್ ಗಳಿಗೆ ಆಲೌಟ್ ಆಗಿದೆ.
ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಸುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಇಂಗ್ಲೆಂಡ್, ಪ್ರಥಮ ಇನ್ನಿಂಗ್ಸ್ ನಲ್ಲಿ 537 ರನ್ ಗಳಿಗೆ ಆಲೌಟ್ ಆಗಿದೆ.
ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ 93 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು. ಇಂದು ಎರಡನೇ ದಿನ ಆರಂಭಿಸಿದ ಇಂಗ್ಲೆಂಡ್ ಬೃಹತ್ ಮೊತ್ತ ಗಳಿಸಿದೆ.
ಇಂಗ್ಲೆಂಡ್ ಪರ ಆರಂಭಿಕರಾದ ಅಲಸ್ಟೈರ್ ಕುಕ್ 21, ಹಸೀಬ್ ಹಮೀದ್ 31, ಬೆನ್ ಡಟೆಕ್ 13, ಜೋ ರೂಟ್ 124, ಮೋಯಿನ್ ಅಲಿ 117, ಹಾಗೂ ಬೆನ್ ಸ್ಟೋಕ್ಸ್ 128 ಹಾಗೂ ಅನ್ಸಾರಿ 32 ರನ್ ಗಳಿಸಿದ್ದಾರೆ.
ಭಾರತ ಪರ ರವೀಂದ್ರ ಜಡೇಜಾ 3, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್ ತಲಾ 2 ವಿಕೆಟ್ ಪಡೆದರೆ, ಅಮಿತ್ ಮಿಶ್ರಾ 1 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ಸರ್ವಪತನದ ನಂತರ ಪ್ರಥಮ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ 12 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 44 ರನ್ ಗಳಿಸಿ ಆಡುತ್ತಿದೆ. ಭಾರತ ಪರ ಗೌತಮ್ ಗಂಭೀರ್ 17 ಹಾಗೂ ಮುರಳಿ ವಿಜಯ್ 21 ರನ್ ಗಳಿಸಿ ಆಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


