67 ವರ್ಷ ಬಳಿಕ ಟೀಂ ಇಂಡಿಯಾ ಟೆಸ್ಟ್ ನಾಯಕರೊಬ್ಬರು ಹಿಟ್ ವಿಕೆಟ್ ಆಗಿದ್ದು!
ದಾಖಲೆಗಳ ಸರದಾರ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿನೂತನ ದಾಖಲೆಯೊಂದನ್ನು ಮಾಡಿದ್ದಾರೆ...

Published On :
ರಾಜ್ಕೋಟ್: ದಾಖಲೆಗಳ ಸರದಾರ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿನೂತನ ದಾಖಲೆಯೊಂದನ್ನು ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ ಸ್ವಯಂಕೃತ ಅಪರಾದ ಎಂಬಂತೆ ತಾವೇ ಹಿಟ್ ವಿಕೆಟ್ ಆಗಿ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
40 ರನ್ ಗಳಿಸಿ ಆಡುತ್ತಿದ್ದ ವಿರಾಟ್ ಕೊಹ್ಲಿ ಆದಿಲ್ ರಶೀದ್ ಎಸೆದ ಬಾಲ್ ಅನ್ನು ಆಡುವ ವೇಳೆ ಅವರ ಕಾಲು ವಿಕೆಟ್ ಗೆ ಬಡಿದು ಬೇಲ್ಸ್ ಬಿತ್ತು. ಹೀಗೆ ದುರದುಷ್ಟಕರ ರೀತಿಯಲ್ಲಿ ಕೊಹ್ಲಿ ಔಟಾದರು. ವಿಶೇಷವೆಂದರೆ 14 ವರ್ಷಗಳ ಬಳಿಕ ಭಾರತೀಯ ಬ್ಯಾಟ್ಸ್ ಮನ್ ಒಬ್ಬರು ಟೆಸ್ಟ್ ನಲ್ಲಿ ಹಿಟ್ ವಿಕೆಟ್ ಆಗಿದ್ದು. ಈ ಹಿಂದೆ ವಿವಿಎಸ್ ಲಕ್ಷ್ಮಣ್ ಅವರು ವಿಂಡೀಸ್ ವಿರುದ್ಧದ ಟೆಸ್ಟ್ ನಲ್ಲಿ ಹಿಟ್ ವಿಕೆಟ್ ಆಗಿ ಔಟಾಗಿದ್ದರು.
ಟೀಂ ಇಂಡಿಯಾದ ನಾಯಕರೊಬ್ಬರು ಟೆಸ್ಟ್ ನಲ್ಲಿ ಹಿಟ್ ವಿಕೆಟ್ ಆಗಿದ್ದು ಸರಿಸುಮಾರು 67 ವರ್ಷಗಳ ಹಿಂದೆ. 1949ರಲ್ಲಿ ಭಾರತ ತಂಡದ ನಾಯಕ ಲಾಲಾ ಅಮರನಾಥ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಹಿಟ್ ವಿಕೆಟ್ ಆಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಇಂಗ್ಲೆಂಡ್EnglandRajkotHit Wicketಹಿಟ್ ವಿಕೆಟ್ರಾಜ್ಕೋಟ್Off Beat
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


