ಇಂಗ್ಲೆಂಡ್ ಉತ್ತಮವಾಗಿ ಆಡಿತು, ಅದೇ ರೀತಿಯ ಪ್ರದರ್ಶನ ನಮ್ಮಿಂದ ಸಾಧ್ಯವಾಗಲಿಲ್ಲ: ವಿರಾಟ್ ಕೊಹ್ಲಿ
ರಾಜ್ ಕೋಟ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಅತ್ಯುತ್ತಮವಾಗಿ ಆಡಿದರು. ಆದರೆ ಅದೇ ರೀತಿಯ ಪ್ರದರ್ಶನ ನಮ್ಮಿಂದ ಸಾಧ್ಯವಾಗಲಿಲ್ಲ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ರಾಜ್ ಕೋಟ್: ರಾಜ್ ಕೋಟ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಅತ್ಯುತ್ತಮವಾಗಿ ಆಡಿದರು. ಆದರೆ ಅದೇ ರೀತಿಯ ಪ್ರದರ್ಶನ ನಮ್ಮಿಂದ ಸಾಧ್ಯವಾಗಲಿಲ್ಲ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಿನ್ನೆ ರಾಜ್ ಕೋಟ್ ನಲ್ಲಿ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯಕಂಡಿತ್ತಾದರೂ ಟೀಂ ಇಂಡಿಯಾ ಆಟಗಾರರ ಪ್ರದರ್ಶನ ಮಾತ್ರ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಮುಖ್ಯವಾಗಿ ಟೀಂ ಇಂಡಿಯಾದ ಬೌಲಿಂಗ್ ಹಾಗೂ ಕ್ಷೇತ್ರ ರಕ್ಷಣೆ ಅತ್ಯಂತ ಕಳಪೆಯಾಗಿತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದೇ ಹಿನ್ನಲೆಯಲ್ಲಿ ನಿನ್ನೆ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಆಟಗಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
"ಇಡೀ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಉತ್ತಮವಾಗಿ ಆಡಿತು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗದಲ್ಲೂ ಇಂಗ್ಲೆಂಡ್ ಆಟಗಾರರು ಮೇಲುಗೈ ಸಾಧಿಸಿದ್ದರು. ಆದರೆ ಅದೇ ರೀತಿಯ ಪ್ರದರ್ಶನ ನಮ್ಮಿಂದ ಸಾಧ್ಯವಾಗಲಿಲ್ಲ. ನಮ್ಮ ಬೌಲರ್ ಗಳಿಂದ ಪರಿಣಾಮಕಾರಿ ಬೌಲಿಂಗ್ ಹೊರಹೊಮ್ಮಲಿಲ್ಲ. ಕ್ಷೇತ್ರ ರಕ್ಷಣೆ ಕೂಡ ಕಳಪೆಯಾಗಿತ್ತು. ಮುಂದಿನ ಪಂದ್ಯಗಳಲ್ಲಿ ಈ ವಿಭಾಗಗಳಲ್ಲಿ ಸಾಕಷ್ಟು ಅಭ್ಯಾಸ ಮಾಡುತ್ತೇವೆ ಎಂದು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


