2ನೇ ಟೆಸ್ಟ್: ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್‌ಗೆ 317 ರನ್
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 317 ರನ್ ಗಳಿಸಿದೆ...

Published On :
ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 317 ರನ್ ಗಳಿಸಿದೆ.
ವಿಶಾಖಪಟ್ಟಣನ ಡಾ.ವೈ.ಎಸ್ ರಾಜಶೇಕರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಇನ್ನಿಂಗ್ಸ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಮುರಳಿ ವಿಜಯ್ ಹಾಗೂ ಕೆಎಲ್ ರಾಹುಲ್ ಜೋಡಿ ಬಹುಬೇಗನೇ ಬೇರ್ಪಟ್ಟಿತು.
ತಂಡದ ಮೊತ್ತ ಕೇವಲ 6 ರನ್ ಗಳಾಗಿದ್ದಾಗ ಬ್ರಾಡ್ ಎಸೆದ ಎರಡನೇ ಓವರ್ ನಲ್ಲಿಯೇ ರಾಹುಲ್ ಸ್ಟೋಕ್ಸ್ ಗೆ ಕ್ಯಾಚಿತ್ತು ಹೊರನಡೆದರು. ಬಳಿಕ ಮುರಳಿ ವಿಜಯ್ ಕೂಡ 20 ರನ್ ಗಳಿಸಿ ಆ್ಯಂಡರ್ಸನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.
ನಂತರ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ಜೋಡಿ ಉತ್ತಮ ಆಟವಾಡುತ್ತಿದ್ದು, ಇಬ್ಬರೂ ಕೂಡ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು. ಚೇತೇಶ್ವರ ಪೂಜಾರ 119 ರನ್ ಹಾಗೂ ಅಜಿಂಕ್ಯಾ ರಹಾನೆ 23 ರನ್ ಗಳಿಸಿ ಔಟಾಗಿದ್ದಾರೆ. ವಿರಾಟ್ ಕೊಹ್ಲಿ ಅಜೇಯ 151 ರನ್ ಗಳಿಸಿದ್ದರೆ ರವಿಚಂದ್ರನ್ ಅಶ್ವಿನ್ 1 ರನ್ ಗಳಿಸಿ ಆಡುತ್ತಿದ್ದಾರೆ.
ಇಂಗ್ಲೆಂಡ್ ಪರ ಆ್ಯಂಡರ್ಸನ್ 3 ವಿಕೆಟ್ ಹಾಗೂ ಬ್ರಾಡ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್VisakhapatnamVirat Kohliವಿರಾಟ್ ಕೊಹ್ಲಿ2ನೇ ಟೆಸ್ಟ್ವಿಶಾಖಪಟ್ಟಣಂ2nd TestIndia-Englandಭಾರತ-ಇಂಗ್ಲೆಂಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


