2ನೇ ಟೆಸ್ಟ್: 103 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್
ಟೀಂ ಇಂಡಿಯಾ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 103 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ...

Published On :
ವಿಶಾಖಪಟ್ಟಣ: ಟೀಂ ಇಂಡಿಯಾ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 103 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ವಿಶಾಖಪಟ್ಟಣನ ಡಾ.ವೈ.ಎಸ್ ರಾಜಶೇಕರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 455 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಪ್ರಥಮ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ದಿನದಾಟದ ಮುಕ್ತಾಯಕ್ಕೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದೆ. ಇಂಗ್ಲೆಂಡ್ ಪರ ಕೂಕ್ 2, ಹಮೀದ್ 13, ರೂಟ್ 53, ಡಕ್ಕೇಟ್ 5 ಮೊಹಮ್ಮದ್ ಅಲಿ 1 ರನ್ ಗಳಿಸಿ ಔಟಾಗಿದ್ದಾರೆ. ಸ್ಟೋಕ್ಸ್ ಅಜೇಯ 12 ಹಾಗೂ ಬೈರ್ಸ್ಟೋ 12 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರತ ಪರ ಆರ್ ಅಶ್ವಿನ್ 2, ಮೊಹಮ್ಮದ್ ಶಮಿ ಹಾಗೂ ಯಾದವ್ 1 ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ಪರ ಮುರಳಿ ವಿಜಯ್ 20, ಕೆಎಲ್ ರಾಹುಲ್ 0, ಚೇತೇಶ್ವರ್ ಪೂಜಾರ 119, ವಿರಾಟ್ ಕೊಹ್ಲಿ 167, ಅಜಿಂಕ್ಯಾ ರಹಾನೆ 23, ಆರ್ ಅಶ್ವಿನ್ 58, ವೃದ್ದಿಮಾನ್ ಸಾಹಾ 3, ರವೀಂದ್ರ ಜಡೇಜಾ 0, ಜೋಗಿಂದರ್ ಯಾದವ್ 35, ಉಮೇಶ್ ಯಾದವ್ 13 ಹಾಗೂ ಮೊಹಮ್ಮದ್ ಶಮಿ ಅಜೇಯ 7 ರನ್ ಗಳಿಸಿದ್ದಾರೆ.
ಇಂಗ್ಲೆಂಡ್ ಪರ ಆ್ಯಂಡರ್ಸನ್, ಮೊಹಮ್ಮದ್ ಅಲಿ ತಲಾ 3 ವಿಕೆಟ್, ರಶೀದ್ 2, ಬ್ರಾಡ್, ಮತ್ತು ಸ್ಟೋಕ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


