ದ್ವಿತೀಯ ಟೆಸ್ಟ್: ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 204 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ...

Published On :
ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 204 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ ನೀಡಿದೆ.
ಡಾ.ವೈ.ಎಸ್ ರಾಜಶೇಕರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ 204 ರನ್ ಗಳಿಗೆ ಟೀಂ ಇಂಡಿಯಾವನ್ನು ಆಲೌಟ್ ಮಾಡಿದೆ. ಉಭಯ ತಂಡಗಳ ಗೆಲುವಿಗೆ ಇನ್ನೊಂದು ದಿನ ಬಾಕಿ ಇದ್ದು ನಾಲ್ಕನೇ ದಿನದಾಟದ ಅಂತ್ಯಕ್ಕೆ ಪಂದ್ಯ ಯಾರ ಕಡೆ ವಾಲಲಿದೆ ಎಂಬುದು ತಿಳಿಯಲಿದೆ.
ಭಾರತ ಮೊದಲ ಇನ್ನಿಂಗ್ಸ್ 455 ರನ್ ಗಳಿಸಿತ್ತು, ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 255 ರನ್ ಗಳಿಗೆ ಆಲೌಟ್ ಆಗಿದ್ದು ಟೀಂ ಇಂಡಿಯಾಗೆ 200 ರನ್ ಗಳ ಮುನ್ನಡೆ ಇತ್ತು. ದ್ವಿತೀಯ ಇನ್ನಿಂಗ್ಸ್ ನಲ್ಲಿ ಆಂಗ್ಲರ ಬೌಲಿಂಗ್ ದಾಳಿಗೆ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


