2ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 246 ರನ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 246 ರನ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.
ಭಾರತ ನೀಡಿದ್ದ 405 ರನ್ ಗಳ ಬೃಹತ್ ರನ್ ಗಳ ಗುರಿಯನ್ನು ಬೆನ್ನುಹತ್ತಿದ ಇಂಗ್ಲೆಂಡ್ ತಂಡ ಉತ್ತಮ ಆರಂಭ ಕಂಡಿತಾದರೂ ನಾಲ್ಕನೇ ದಿನದಂತ್ಯದಲ್ಲಿ ಭಾರತದ ಸ್ಪಿನ್ನರ್ ಅಶ್ವಿನ್ ಅವರ ಮಾರಕ ಬೌಲಿಂಗ್ ಗೆ ತತ್ತರಿಸಿದ್ದು. ನಾಲ್ಕನೇ ದಿನ 2 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ತಂಡ ಐದನೇ ದಿನದ ಮಧ್ಯಾಹ್ನದ ವೇಳೆಗೇ ಕೇವಲ 158ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರತ ಎದುರು 246 ರನ್ ಗಳ ಹೀನಾಯ ಸೋಲು ಕಂಡಿತು.
ಪ್ರಮುಖವಾಗಿ ಭಾರತ ಸ್ಪಿನ್ ಸ್ಪೆಷಲಿಸ್ಟ್ ಆರ್ ಅಶ್ವಿನ್ ಅವರ ಪ್ರಭಾವಿ ದಾಳಿ ಹಾಗೂ ಯಾದವ್ ಅವರ ಮಾರಕ ವೇಗಕ್ಕೆ ತತ್ತರಿಸಿಹೋದ ಇಂಗ್ಲೆಂಡ್ ಬ್ಯಾಟ್ಸಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು. ನಿನ್ನೆ 2 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿದ್ದ ಇಂಗ್ಲೆಂಡ್ ತಂಡ ಇಂದು ಕೇವಲ 158 ರನ್ ಗಳಿಗೆ ಆಲ್ ಔಟ್ ಆಯಿತು. ಐದನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ಡಕ್ಕೆಟ್ ಅಶ್ವಿನ್ ಬೌಲಿಂಗ್ ನಲ್ಲಿ ಶೂನ್ಯಕ್ಕೇ ವಿಕೆಟ್ ಕೈ ಚೆಲ್ಲಿದರು. ಬಳಿಕ ಬಂದ ಅಲಿ ಕೂಡ ಕೇವಲ 2 ರನ್ ಗಳಿಸಿ ಜಡೇಜಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಸ್ಟೋಕ್ಸ್ ಕೂಡ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲದೇ 6 ರನ್ ಗಳಿಸಿ ಯಾದವ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು.
ಬಳಿಕ ನಿನ್ನೆಯಿಂದ ಕ್ರೀಸ್ ಕಾಯ್ದುಕೊಂಡು ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಗಿದ್ದ ಜೋರೂಟ್ ಕೂಡ 25 ರನ್ ಗಳಿಸಿ ಶಮಿ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬೇರ್ ಸ್ಟೋವ್ ಅವರನ್ನು ಹೊರತು ಪಡಿಸಿದರೆ ನಂತರ ಬಂದ ಯಾವೊಬ್ಬ ಬ್ಯಾಟ್ಸಮನ್ ಕೂಡ ಇಂಗ್ಲೆಂಡ್ ಬ್ಯಾಟಿಂಗ್ ಬಲ ನೀಡಲಿಲ್ಲ. ಅಂತಿಮವಾಗಿ ಬೇರ್ ಸ್ಟೋವ್ ಅವರ ಹೋರಾಟದ ಅಜೇಯ 34 ರನ್ ಗಳ ಹೊರತಾಗಿಯೂ ಇಂಗ್ಲೆಂಡ್ ತಂಡ ಸೋಲು ಕಂಡಿತು.
ಭಾರತ ಪರ ಆರ್ ಆಶ್ವಿನ್ ಹಾಗೂ ಯಾದವ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಶಮಿ ಹಾಗೂ ಜಡೇಜಾ ತಲಾ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


