ಬಳ್ಳಾರಿ ಟಸ್ಕರ್ಸ್ ಗೆ ಕೆಪಿಎಲ್-2016ರ ಕಿರೀಟ
2016ನೇ ಸಾಲಿನ ಕೆಪಿಎಲ್ ಕಿರೀಟ ಬಳ್ಳಾರಿ ಟಸ್ಕರ್ಸ್ ಪಾಲಾಗಿದ್ದು, ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವನ್ನು 35 ರನ್ ಗಳ ಅಂತರದಲ್ಲಿ ಮಣಿಸಿದ ಬಳ್ಳಾರಿ ತಂಡ ಪ್ರಶಸ್ತಿಗೆ ಮುತ್ತಿಟ್ಟಿತು.

ಹುಬ್ಬಳ್ಳಿ: 2016ನೇ ಸಾಲಿನ ಕೆಪಿಎಲ್ ಕಿರೀಟ ಬಳ್ಳಾರಿ ಟಸ್ಕರ್ಸ್ ಪಾಲಾಗಿದ್ದು, ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವನ್ನು 35 ರನ್ ಗಳ ಅಂತರದಲ್ಲಿ ಮಣಿಸಿದ ಬಳ್ಳಾರಿ ತಂಡ ಪ್ರಶಸ್ತಿಗೆ ಮುತ್ತಿಟ್ಟಿತು.
ಹುಬ್ಬಳ್ಳಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಳ್ಳಾರಿ ಟಸ್ಕರ್ಸ್ ತಂಡ ರೋಹನ್ ಕದಮ್ (61 ರನ್), ಬಿ.ಅಖಿಲ್ (50 ರನ್) ಹಾಗೂ ಸುನೀಲ್ ರಾಜು (36 ರನ್) ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಆ ಮೂಲಕ ಹುಬ್ಳಳ್ಳಿ ತಂಡಕ್ಕೆ ಗೆಲ್ಲಲು 190 ರನ್ ಗಳ ಕಠಿಣ ಗುರಿ ನೀಡಿತು.
ಈ ಮೊತ್ತವನ್ನು ಬೆನ್ನುಹತ್ತಿದ ಹುಬ್ಳಳ್ಳಿ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿತು. ಹುಬ್ಳಳ್ಳಿ ಪರ ನೇಗಿ (36 ರನ್), ತಾಹಾ (36 ರನ್) ಕೊಂಚ ಪ್ರತಿರೋಧ ಒಡ್ಡಿದರಾದರೂ, ಬಳ್ಳಾರಿ ತಂಡ ಸ್ಟ್ವೀವ್ ಅವರ (21ಕ್ಕೆ 3 ವಿಕೆಟ್) ಅವರ ಮಾರಕ ಬೌಲಿಂಗ್ ದಾಳಿಗೆ ತುತ್ತಾಗಿ ಸೋಲು ಒಪ್ಪಿಕೊಂಡಿತು. ಅಂತಿಮವಾಗಿ ಹುಬಳ್ಳಿ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಬಳ್ಳಾರಿ ವಿರುದ್ಧ 35 ರನ್ ಗಳ ಅಂತರದ ಸೋಲು ಕಂಡಿತು.
ಬಳ್ಳಾರಿ ಪರ ಉತ್ತಮ ಆಲ್ ರೌಂಡ್ ಪ್ರದರ್ಶನ ನೀಡಿದ ಅಖಿಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


