ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಸರಣಿ ಕೈವಶ
ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ...

ಕೋಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 178 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಗೆಲ್ಲಲು 376 ರನ್ ಗಳ ಬೃಹತ್ ಮೊತ್ತ ಪಡೆದಿದ್ದ ನ್ಯೂಜಿಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 197 ರನ್ ಗಳಿಗೆ ಆಲೌಟ್ ಆಗಿ ಟೀಂ ಇಂಡಿಯಾಗೆ ಶರಣಾಗಿದೆ.
ನ್ಯೂಜಿಲೆಂಡ್ ಆರಂಭಿಕರಾದ ಗಪ್ಟಿಲ್ ಹಾಗೂ ಲಾಥಮ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಆರ್ ಅಶ್ವಿನ್ ಅವರು ಉತ್ತಮವಾಗಿ ಆಡುತ್ತಿದ್ದ ಮಾರ್ಟಿನ್ ಗಪ್ಟಿಲ್(24) ಹಾಗೂ ಟಾಮ್ ಲೂಥಮ್(74) ವಿಕೆಟ್ ಕೀಳುವ ಮೂಲಕ ಭಾರತಕ್ಕೆ ಚೇತರಿಕೆ ನೀಡಿದರು. ಬಳಿಕ ಬಂದ ಇನ್ಯಾವ ಆಟಗಾರನು ಭಾರತೀಯರ ದಾಳಿ ಎದುರಿಸಲು ಸಾಧ್ಯವಾಗಲಿಲ್ಲ.
ಭಾರತದ ಪರ ಸ್ಪಿನ್ನರ್ ಗಳಾದ ಆರ್. ಅಶ್ವಿನ್, ರವೀಂದ್ರ ಜಡೇಜಾ ಹಾಗೂ ವೇಗಿ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದು ಮಿಂಚಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


