ಭಾರತ ವಿರುದ್ಧ ಯುದ್ಧಕ್ಕೆ ಪಾಕ್ ಸಿದ್ಧ; ಮಿಯಾಂದಾದ್ ಹೇಳಿಕೆಗೆ ಅನುರಾಗ್ ತಿರುಗೇಟು
ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಬಳಿಕ ಭಾರತಕ್ಕೆ ಎಚ್ಚರಿಕೆ ನೀಡಿದ್ದ ಪಾಕ್ ನ ಮಾಜಿ ಕ್ರಿಕೆಟಿಗ ಜಾವೇದ ಮಿಯಾಂದಾದ್ ಗೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್...

ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಬಳಿಕ ಭಾರತಕ್ಕೆ ಎಚ್ಚರಿಕೆ ನೀಡಿದ್ದ ಪಾಕ್ ನ ಮಾಜಿ ಕ್ರಿಕೆಟಿಗ ಜಾವೇದ ಮಿಯಾಂದಾದ್ ಗೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮತ್ತು ಯುದ್ಧಭೂಮಿ ಎರಡರಲ್ಲೂ ಕಂಡ ಸೋಲಿನಿಂದ ಜಾವೇದ್ ಮಿಯಾಂದಾದ್ ಇನ್ನು ಸುಧಾರಿಸಿಕೊಂಡಿಲ್ಲ ಎಂದು ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ.
ಪಾಕ್ ಟಿವಿ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ್ದ ಸಂದರ್ಭದಲ್ಲಿ ಮಿಯಾಂದಾದ್ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನಾ ಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಭಾರತ ವಿರುದ್ಧ ಯಾವುದೇ ಯುದ್ಧಕ್ಕೂ ಪಾಕಿಸ್ತಾನ ತಯಾರಿದೆ ಎಂದು ಹೇಳಿದ್ದರು.
ಇದಕ್ಕೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್, ಪಾಕಿಸ್ತಾನ 1965, 1971 ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾರತದಿಂದ ಉಂಟಾದ ಅಘಾತದಿಂದ ಇನ್ನು ಹೊರಬಂದಿಲ್ಲ. ಅದರಂತೆ ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಒಂದು ಪಂದ್ಯವನ್ನು ಗೆಲ್ಲದಿರುವ ಹತಾಶೆ ಇದೆ. ಅವಶ್ಯಕತೆ ಇದ್ದರೆ, ಭಾರತ ಕ್ರಿಕೆಟ್ ಮೈದಾನ ಅಥವಾ ಯುದ್ಧಭೂಮಿಯಲ್ಲಿ ಮತ್ತೊಮ್ಮೆ ಪಾಕಿಸ್ತಾನವನ್ನು ಧೂಳೆಬ್ಬಿಸುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


