ಕ್ರಿಕೆಟ್

ಕಿವೀಸ್ ವಿರುದ್ಧದ ಏಕದಿನ ತಂಡ ಪ್ರಕಟ, ಟೀಂ ಇಂಡಿಯಾಗೆ ಮರಳಿದ ಸುರೇಶ್ ರೈನಾ

ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಸ್ಫೋಟಕ...

ಕಿವೀಸ್ ವಿರುದ್ಧದ ಏಕದಿನ ತಂಡ ಪ್ರಕಟ, ಟೀಂ ಇಂಡಿಯಾಗೆ ಮರಳಿದ ಸುರೇಶ್ ರೈನಾ
ಸುರೇಶ್ ರೈನಾ
Published On :
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಸ್ಫೋಟಕ ಬ್ಯಾಟ್ಸ್‌ಮನ್ ಸುರೇಶ್ ರೈನಾ ಅವರು ತಂಡಕ್ಕೆ ಮರಳಿದ್ದಾರೆ.
ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಇಂದು ಸಂಜೆ ಕಿವೀಸ್ ವಿರುದ್ಧದ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕದ ಮನೀಶ್ ಪಾಂಡೆ ಹಾಗೂ ಹೊಸ ಪ್ರತಿಭೆ ಹರಿಯಾಣದ ಜಯಂತ್ ಯಾದವ್ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. 
ಏಕದಿನ ಸರಣಿ ವೇಳಾಪಟ್ಟಿಯ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಏಕದಿನ ಪಂದ್ಯಗಳಿಗೆ 15 ಮಂದಿ ತಂಡವನ್ನು ಪ್ರಕಟಿಸಲಾಗಿದೆ. ಯುವರಾಜ್ ಸಿಂಗ್ ರನ್ನು ಕಡೆಗಣಿಸಲಾಗಿದ್ದರೆ, ಆಲ್ ರೌಂಡರ್ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಮೊದಲ ಏಕದಿನ ಪಂದ್ಯ ಧರ್ಮಶಾಲದಲ್ಲಿ ಅಕ್ಟೋಬರ್ 16ರಂದು ಆರಂಭವಾಗಲಿದೆ. ಅಕ್ಟೋಬರ್ 29ರಂದು ವಿಶಾಖಪಟ್ಟಣಂನಲ್ಲಿ ಐದನೇ ಹಾಗೂ ಅಂತಿಮ ಪಂದ್ಯ ನಿಗದಿಯಾಗಿದೆ.
ಟೀಂ ಇಂಡಿಯಾ
ಎಂಎಸ್ ಧೋನಿ(ನಾಯಕ), ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಮನೀಶ್ ಪಾಂಡೆ, ಸುರೇಶ್ ರೈನಾ, ಹಾರ್ದಿಕ್ ಪಾಂಡ್ಯ. ಅಕ್ಷರ್ ಪಟೇಲ್, ಜಯಂತ್ ಯಾದವ್, ಅಮಿತ್ ಮಿಶ್ರಾ, ಜಸ್ಪ್ರೀತ್ ಬೂಮ್ರಾ, ಧವಳ್ ಕುಲಕರ್ಣಿ, ಉಮೇಶ್ ಯಾದವ್, ಮನ್ದೀಪ್ ಸಿಂಗ್, ಕೇದಾರ್ ಜಾಧವ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.