ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್: ಗಂಭೀರ್‌ಗೆ ಕೊನೆ ಅವಕಾಶ

ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದ ಕನ್ನಡಿಗ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಆಡಲು ಅವಕಾಶ ಸಿಕ್ಕ ಗೌತಮ್ ಗಂಭೀರ್...

ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್: ಗಂಭೀರ್‌ಗೆ ಕೊನೆ ಅವಕಾಶ
ಗೌತಮ್ ಗಂಭೀರ್
Published On :

ಇಂದೋರ್: ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದ ಕನ್ನಡಿಗ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಆಡಲು ಅವಕಾಶ ಸಿಕ್ಕ ಗೌತಮ್ ಗಂಭೀರ್ ಗೆ ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಕೊನೆಯ ಅವಕಾಶವಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ನಲ್ಲಿ ಗಂಭೀರ್ ತಂಡದಲ್ಲಿ ಆಡುವುದು ನಿಚ್ಚಳವಾಗಿದ್ದು, ಟೀಂ ಇಂಡಿಯಾದಲ್ಲಿ ಇನ್ನೂ ಕೆಲ ವರ್ಷ ಸ್ಥಾನ ಉಳಿಸಿಕೊಳ್ಳುವ ದೃಷ್ಟಿಯಲ್ಲಿ ಗಂಭೀರ್ ಗೆ ಇದು ಕೊನೆಯ ಅವಕಾಶವಾಗಿದೆ.

ಇಂಗ್ಲೆಂಡ್ ವಿರುದ್ಧ 2014ರ ಓವಲ್ ಟೆಸ್ಟ್ ಬಳಿಕ ತಂಡದಿಂದ ಹೊರಬಿದ್ದಿದ್ದ ಗಂಭೀರ್ ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ನಿರ್ವಹಣೆ ತೋರುವ ಮೂಲಕ ಮತ್ತೆ ತಂಡಕ್ಕೆ ವಾಪಸಾಗಿದ್ದರು.

ಇನ್ನು ಶಿಖರ್ ಧವನ್ ಸಹ ಗಾಯಗೊಂಡಿರುವ ಕಾರಣ ಇಂದೋರ್ ಟೆಸ್ಟ್ ನಲ್ಲಿ ಮುರಳಿ ವಿಜಯ್ ಗೆ ಆರಂಭಿಕರಾಗಿ ಗಂಭೀರ್ ಕಣಕ್ಕಳಿಯಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.