ಕೊಹ್ಲಿ ಮತ್ತೊಂದು ದಾಖಲೆ: ಟೆಸ್ಟ್ ನಲ್ಲಿ 2ನೇ ದ್ವಿಶತಕ ಗಳಿಸಿದ ಭಾರತದ ಮೊದಲ ಕ್ಯಾಪ್ಟನ್
ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ...

ಇಂಧೋರ್ : ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕರ್ಷಕ 2ನೇ ದ್ವಿ ಶತಕ ಸಿಡಿಸಿದ್ದಾರೆ.
ಇದರೊಂದಿಗೆ ವಿರಾಟ್ ಕೊಹ್ಲಿ ಒಂದೇ ಟೆಸ್ಟ್ ನಲ್ಲಿ ದ್ವಿಶತಕ ಭಾರಿಸಿದ ಮೊದಲ ಭಾರತೀಯ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ನಲ್ಲಿ ಕೊಹ್ಲಿ ದ್ವಿ ಶತಕ ಗಳಿಸಿದ್ದರು.
ಮೊದಲ ದಿನದಾಟದಲ್ಲಿ ಶತಕ ದಾಖಲಿಸಿದ್ದ ವಿರಾಟ್ ಕೊಹ್ಲಿ, ಎರಡನೇ ದಿನದಾಟದ ಭೋಜನ ವಿರಾಮದ ನಂತರ 150ರ ಗಡಿ ಮುಟ್ಟಿದ್ದರು, ಈಗ ದ್ವಿ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ. 347 ಎಸೆತ ಎದುರಿದ ಕೊಹ್ಲಿ 200 ರನ್ ಗಡಿ ದಾಖಲಿಸಿದ್ದಾರೆ. ರಹಾನೆ 159 ರನ್ ಗಳಿಸಿ ಬ್ಯಾಟಿಂಗ್ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


