ಎಂಎಸ್ ಧೋನಿ ಕುರಿತು ಪೆದ್ದು ಪೆದ್ದಾಗಿ ಟ್ವೀಟ್ ಮಾಡಿ ನಗೆಗೀಡಾದ ಜಿಂಬಾಬ್ವೆ ಮಾಜಿ ನಾಯಕ
ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕ ಮಹೇಂದ್ರ ಸಿಂಗ್ ಧೋನಿ ಕುರಿತು ಪೆದ್ದು ರೀತಿಯಲ್ಲಿ ಟ್ವೀಟ್ ಮಾಡಿರುವ ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್....

ನವದೆಹಲಿ: ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕ ಮಹೇಂದ್ರ ಸಿಂಗ್ ಧೋನಿ ಕುರಿತು ಪೆದ್ದು ರೀತಿಯಲ್ಲಿ ಟ್ವೀಟ್ ಮಾಡಿರುವ ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್ ಟೇಲರ್ ಪೇಚಿಗೆ ಸಿಲುಕಿದ್ದಾರೆ.
ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾದ ಹನ್ನೊಂದರಲ್ಲಿ ಎಂಎಸ್ ಧೋನಿ ಅವರ ಹೆಸರಿದ್ದಿದ್ದನ್ನು ಕಂಡ ಬ್ರೆಂಡನ್ ಟೇಲರ್ ಏಕದಿನ ಪಂದ್ಯವನ್ನು ಟೆಸ್ಟ್ ಪಂದ್ಯ ಎಂದು ತಪ್ಪಾಗಿ ಭಾವಿಸಿ ಧೋನಿ ಟೆಸ್ಟ್ ನಿಂದ ನಿವೃತ್ತಿ ಹೊಂದಿದ್ದಾರಲ್ಲ. ಮತ್ತೇಕೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಟ್ವೀಟಿಸಿ ಇದೀಗ ಪೇಚಿಗೆ ಸಿಲುಕಿದ್ದಾರೆ.
ಎಂಎಸ್ ಧೋನಿ ಬಗ್ಗೆ ಬ್ರೆಂಡನ್ ಟೈಲರ್ ಈ ರೀತಿ ಟ್ವೀಟ್ ಮಾಡುತ್ತಿದ್ದಂತೆ ಧೋನಿ ಅಭಿಮಾನಿಗಳು ಬ್ರೆಂಡನ್ ಕಾಲು ಎಳೆದಿದ್ದಾರೆ.
ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ಬ್ರೆಂಡನ್ ಟೇಲರ್ ಕೂಡಲೇ ತಾವು ತಪ್ಪಾಗಿ ಅರ್ಥೈಸಿಕೊಂಡು ಟ್ವೀಟ್ ಮಾಡಿದ್ದು ತಮ್ಮ ತಪ್ಪಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ರಿಕೆಟ್ ಗೊತ್ತಿಲ್ಲದವರು ಈ ರೀತಿ ಟ್ವೀಟ್ ಮಾಡಿದರೆ ಸರಿ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದೇಶವನ್ನು ಪ್ರತಿನಿಧಿಸುವ ಕ್ರಿಕೆಟ್ ಆಟಗಾರನೊಬ್ಬ ಈ ರೀತಿ ಪೆದ್ದತನದಿಂದ ಮಾತನಾಡಿರುವುದು ಹಾಸ್ಯಾಸ್ಪದವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


