ನ್ಯೂಜಿಲ್ಯಾಂಡ್ ವಿರುದ್ಧ 2ನೇ ಏಕದಿನ ಪಂದ್ಯ: ಭಾರತಕ್ಕೆ 243 ರನ್ ಗುರಿ
ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲ್ಯಾಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಭಾರತಕ್ಕೆ 243 ರನ್ ಗಳ ಗುರಿ ನೀಡಿದೆ.

ನವದೆಹಲಿ: ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲ್ಯಾಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಭಾರತಕ್ಕೆ 243 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ ಸನ್ ಸಿಡಿಸಿದ 118 ರನ್ ಗಳ ನೆರವಿನಿಂದ ನ್ಯೂಜಿಲ್ಯಾಂಡ್ ತಂಡ 9 ವಿಕೆಟ್ ನಷ್ಟಕ್ಕೆ 242 ರನ್ ಕಲೆ ಹಾಕಿದೆ. ಆರಂಭಿಕ ಆಟಗಾರ ಮಾರ್ಟಿಕ್ ಗುಪ್ಟಿಲ್ ವಿಕೆಟ್ ಪಡೆಯುವ ಮೂಲಕ ಉಮೇಶ್ ಯಾದವ್ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲ್ಯಾಂಡ್ ತಂಡಕ್ಕೆ ಪ್ರಾರಂಭಿಕ ಆಘಾತ ನೀಡಿದರು. ನಂತರ ನಾಯಕ ಕೇನ್ ವಿಲಿಯಮ್ ಸನ್ ಜೊತೆಗೆ ಆರಂಭಿಕ ಆಟಗಾರ 46 ರನ್ ಗಳನ್ನು ಗಳಿಸಿದ್ದು ಭಾರತದ ವಿರುದ್ಧ ನ್ಯೂಜಿಲ್ಯಾಂಡ್ 242 ರನ್ ಗಳನ್ನು ಪೇರಿಸುವುದಕ್ಕೆ ನೆರವಾಯಿತು. ಇನ್ನು ಭಾರತದ ಬೌಲಿಂಗ್ ವಿಭಾದಲ್ಲಿ ಮಿಂಚಿದ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರ ಹಾಗೂ ವೇಗಿ ಜಸ್ಪ್ರೀತ್ ಭೂಮ್ರಾ ತಲಾ ಮೂರು ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


