ಕ್ರಿಕೆಟ್

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ
ಭರ್ಜರಿ ಶತಕ ಭಾರಿಸಿದ ಕೊಹ್ಲಿ ಬ್ಯಾಟಿಂಗ್ ವೈಖರಿ (ಕ್ರಿಕ್ ಇನ್ಫೋ ಚಿತ್ರ)
Published On :

ಮೊಹಾಲಿ: ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್  ಗಳ ಭರ್ಜರಿ ಜಯ ಸಾಧಿಸಿದೆ.

ಪಂಜಾಬ್ ನ ಮೊಹಾಲಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ  ವಿಲಿಯಮ್ಸನ್ ಪಡೆ ನೀಡಿದ್ದ 286 ರನ್ ಗಳ ಸವಾಲಿನ ಮೊತ್ತವನ್ನು ಬೆನ್ನು ಹತ್ತಿದ ಧೋನಿ  ಪಡೆ ಇನ್ನೂ 10 ಎಸೆತ ಬಾಕಿ ಇರುವಂತೆಯೇ 286 ರನ್ ಗಳಿಸುವ ಮೂಲಕ ಭರ್ಜರಿ ಜಯ  ಸಾಧಿಸಿದೆ.

ನ್ಯೂಜಿಲೆಂಡ್ ನೀಡಿದ 286 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ  ನ್ಯೂಜಿಲೆಂಡ್ ಬೌಲರ್ ಹೆನ್ರಿ ಆರಂಭಿಕ ಆಘಾತ ನೀಡಿದರು. 5 ರನ್ ಗಳಿಸಿದ್ದ ರಹಾನೆ  ಸ್ಯಾಂಥ್ನರ್ ಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಬಳಿಕ ರೋಹಿತ್ ಶರ್ಮಾ ಕೂಡ 13 ರನ್  ಗಳಿಸಿ ನಿರ್ಗಮಿಸಿದರು. ಆದರೆ ಈ ಹಂತದಲ್ಲಿ ಜೊತೆಗೂಡಿದ ಧೋನಿ (80 ರನ್) ಹಾಗೂ  ವಿರಾಟ್ ಕೊಹ್ಲಿ (ಅಜೇಯ 154 ರನ್)ಜೋಡಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು.

ದಾಖಲೆಯ ಜೊತೆಯಾಟವಾಡಿದ ಈ ಜೋಡಿ ಭರ್ಜರಿ 150 ರನ್ ಗಳ  ಜೊತೆಯಾಟವಾಡಿತು. ಧೋನಿ 80 ರನ್ ಗಳಿಸಿ ಶತಕದತ್ತ ಮುನ್ನುಗ್ಗುತ್ತಿದ್ದರೆ, ಕೊಹ್ಲಿ ಶತಕ  ಸಿಡಿಸಿ ಸಂಭ್ರಮಿಸಿದರು. ಈ ಹಂತದಲ್ಲಿ ಹೆನ್ರಿ ಬೌಲಿಂಗ್ ನಲ್ಲಿ ವಿಕೆಟ್ ಕೈ ಚೆಲ್ಲಿದರು.

ಬಳಿಕ ಬಂದ ಕರ್ನಾಟಕದ ಆಟಗಾರ ಮನೀಷ್ ಪಾಂಡೆ ಅವರು ಕೊಹ್ಲಿ ಜೊತೆಗೂಡಿ  ಗೆಲುವಿನ ಔಪಚಾರಿಕತೆ ಮುಗಿಸಿದರು. ಪಾಂಡೆ 28 ರನ್ ಗಳಿಸಿ ಅಜೇರಾಗಿ ಉಳಿದರೆ, ಕೊಹ್ಲಿ  ಭರ್ಜರಿ 154 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.