3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ನ್ಯೂಜಿಲೆಂಡ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊಹಾಲಿ: ನ್ಯೂಜಿಲೆಂಡ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಪಂಜಾಬ್ ನ ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಟಾಸ್ ಸೋತು ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆರಂಭಿಸಿದೆ.
ದೆಹಲಿಯಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದ ಸೋತಿರುವ ಭಾರತ ತಂಡ 3ನೇ ಏಕದಿನ ಪಂದ್ಯದಲ್ಲಿ ತಿರುಗೇಟು ನೀಡುವ ಉತ್ಸಾಹದಲ್ಲಿದೆ. ಅಂತೆಯೇ ಕಳೆದ ಪಂದ್ಯದ ಗೆಲುವಿನ ಉತ್ಸಾಹದಲ್ಲಿರುವ ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ. ಇತ್ತೀಚಿನ ವರದಿಗಳು ಬಂದಾಗ ನ್ಯೂಜಿಲೆಂಡ್ ತಂಡ 4.2 ಓವರ್ ನಲ್ಲಿ 24 ರನ್ ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


