ಸರಣಿ ಗೆಲುವಿನ ಪಂದ್ಯ: ನ್ಯೂಜಿಲೆಂಡ್‌ಗೆ 270 ರನ್ ಗುರಿ
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 269 ರನ್ ಗಳಿಸಿದ್ದು ನ್ಯೂಜಿಲೆಂಡ್‌ಗೆ 270 ರನ್ ಗಳ ಸವಾಲು...

Published On :
ವಿಶಾಖಪಟ್ಟಂ: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 269 ರನ್ ಗಳಿಸಿದ್ದು ನ್ಯೂಜಿಲೆಂಡ್‌ಗೆ 270 ರನ್ ಗಳ ಸವಾಲು ನೀಡಿದೆ.
ವೈಎಸ್ ರಾಜಶೇಕರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 269 ರನ್ ಗಳಿಸಿದೆ.
ಟೀಂ ಇಂಡಿಯಾ ಪರ ಅಜಿಂಕ್ಯ ರಹಾನೆ 20, ರೋಹಿತ್ ಶರ್ಮಾ 70, ವಿರಾಟ್ ಕೊಹ್ಲಿ 65, ಎಂಎಸ್ ಧೋನಿ 41, ಅಕ್ಷರ್ ಪಟೇಲ್ 24 ಹಾಗೂ ಕೇದರ್ ಜಾದವ್ ಅಜೇಯ 39 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ ಪರ ಬೋಲ್ಟ್, ಸೋಧಿ ತಲಾ 2 ವಿಕೆಟ್ ಪಡೆದರೆ, ನೀಶಾಮ್, ಸ್ಯಾಟ್ನರ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


