ಟಿ20: 263 ರನ್ ಗಳಿಸಿ ವಿಶ್ವದಾಖಲೆ ಬರೆದ ಆಸೀಸ್
ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಗರಿಷ್ಠ 263 ರನ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ ವಿಶ್ವದಾಖಲೆ ಸೃಷ್ಟಿಸಿದೆ...

ಪಲ್ಲೆಕಿಲೆ: ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಗರಿಷ್ಠ 263 ರನ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ ವಿಶ್ವದಾಖಲೆ ಸೃಷ್ಟಿಸಿದೆ.
ಪಲ್ಲೆಕಿಲೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 3 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿದೆ. ಗ್ಲೆನ್ ಮ್ಯಾಕ್ಸ್ ಅವರ ಭರ್ಜರಿ 145 ರನ್ ಗಳ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಈ ಸಾಧನೆ ಮಾಡಲು ಸಾಧ್ಯವಾಯಿತು. 264 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಸಾಧ್ಯವಾಯಿತು.
2007 ರಲ್ಲಿ ಶ್ರೀಲಂಕಾ ಜೊಹಾನ್ಸ್ ಬರ್ಗ್ ನಲ್ಲಿ ಕೀನ್ಯಾ ವಿರುದ್ಧ 3 ವಿಕೆಟ್ ಗೆ 260 ರನ್ ಪೇರಿಸಿದ್ದು ತಂದವೊಂದರ ಸದ್ಯದ ಗರಿಷ್ಠ ರನ್ ಮೊತ್ತವಾಗಿತ್ತು. ಇದೀಗ 263 ರನ್ ಗಳನ್ನು ಪೇರಿಸುವ ಮೂಲಕ ಈ ದಾಖಲೆಯನ್ನು ಆಸ್ಟ್ರೇಲಿಯಾ ಅಳಿಸಿ ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


