ಕೆಪಿಎಲ್ ಟಿ20: ಸೆಮಿಫೈನಲ್ ಗೆ ಮೈಸೂರು ವಾರಿಯರ್ಸ್
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಕೆಪಿಎಲ್ ಟಿ20 ಸೆಮಿಫೈನಲ್ ಗೆ...

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಕೆಪಿಎಲ್ ಟಿ20 ಸೆಮಿಫೈನಲ್ ಗೆ ಪ್ರವೇಶಿಸಿದೆ.
ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮೈಸೂರು ತಂಡ ನಿಗದಿತ ಓವರ್ ನಲ್ಲಿ 142 ರನ್ ಗಳಿಸಿತು. ಮೈಸೂರು ತಂಡ ನಾಯಕ ಮನೀಷ್ ಪಾಂಡ್ಯೆ 44 ರನ್ ಹಾಗೂ ಜೋನಾಥನ್ 43 ರನ್ ಗಳ ನೆರವಿನಿಂದ 142 ರನ್ ಗಳಿಸಲು ಸಾಧ್ಯವಾಯಿತು. 143 ರನ್ ಗಳ ಗುರಿ ಬೆನ್ನಟ್ಟಿದ ಬೆಳಗಾವಿ ತಂಡ 17.2 ಓವರ್ ನಲ್ಲಿ 108 ರನ್ ಗಳಿಸಿ 34 ರನ್ ಗಳಿಂದ ಮೈಸೂರು ತಂಡಕ್ಕೆ ಶರಣಾಯಿತು.
ಬೆಳಗಾವಿ ತಂಡದ ಆರಂಭಿಕ ಆಟಗಾರ ಮಾಯಂಕ್ ಅಗರವಾಲ್ ಹಾಗೂ ವಿನಯ್ ಬಿಟ್ಟರೆ ಮತ್ಯಾರು ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


