ರವಿಚಂದ್ರನ್ ಅಶ್ವಿನ್ ಅಲ್ಲ, ರೆಕಾರ್ಡ್ ಚಂದ್ರನ್ ಅಶ್ವಿನ್: ಸೆಹ್ವಾಗ್
ಟೆಸ್ಟ್ ನಲ್ಲಿ ಅತೀವೇಗದಲ್ಲಿ 200 ವಿಕೆಟ್ ಪಡೆದು ಸಾಧನೆ ಮಾಡಿರುವ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಟೀಂ ಇಂಡಿಯಾ ಆಟಗಾರ ವಿರೇಂದ್ರ ಸೆಹ್ವಾಗ್ ರೆಕಾರ್ಡ್...

ಕಾನ್ಪುರ್: ಟೆಸ್ಟ್ ನಲ್ಲಿ ಅತೀವೇಗದಲ್ಲಿ 200 ವಿಕೆಟ್ ಪಡೆದು ಸಾಧನೆ ಮಾಡಿರುವ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಟೀಂ ಇಂಡಿಯಾ ಆಟಗಾರ ವಿರೇಂದ್ರ ಸೆಹ್ವಾಗ್ ರೆಕಾರ್ಡ್ ಚಂದ್ರನ್ ಅಶ್ವಿನ್ ಎಂದು ಹೆಸರಿಟ್ಟಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆರ್ ಅಶ್ವಿನ್ ತಮ್ಮ ಹೆಸರಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದು ಇದಕ್ಕೆ ವಿರೇಂದ್ರ ಸೆಹ್ವಾಗ್ ಟ್ವಿಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ರೆಕಾರ್ಡ್ ಚಂದ್ರನ್ ಅಶ್ವಿನ್ ಎಂದು ಹೊಸ ನಾಮಕರಣ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್ ವಿಕೆಟ್ ಪಡೆಯುವ ಮೂಲಕ 200ನೇ ವಿಕೆಟ್ ಪಡೆದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 200ನೇ ವಿಕೆಟ್ ಪಡೆದ ವಿಶ್ವದ ಎರಡನೇ ಹಾಗೂ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದು, ಅವರಿಗೆ ಹಲವು ಆಟಗಾರರು ಶುಭಾಶಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


