2 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಗಂಭೀರ್ ಪುನರಾಗಮನ
ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಎಡಗೈ ಆರಂಭಿಕ ಆಟಗಾರ ಗೌತಮ್ ಗಂಭೀರ್ 2 ವರ್ಷಗಳ ಬಳಿಕ ಮತ್ತೆ ಟೀಂ ಇಂಡಿಯಾ ತಂಡವನ್ನು ಸೇರಿದ್ದಾರೆ...

ನವದೆಹಲಿ: ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಎಡಗೈ ಆರಂಭಿಕ ಆಟಗಾರ ಗೌತಮ್ ಗಂಭೀರ್ 2 ವರ್ಷಗಳ ಬಳಿಕ ಮತ್ತೆ ಟೀಂ ಇಂಡಿಯಾ ತಂಡವನ್ನು ಸೇರಿದ್ದಾರೆ.
ಕಾನ್ಪುರ ಟೆಸ್ಟ್ ವೇಳೆ ಗಾಯಗೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದು, ಗೌತಮ್ ಗಂಭೀರ್ ಉಳಿದ ಎರಡು ಪಂದ್ಯಗಳಿಗೆ ತಂಡದಲ್ಲಿ ಆರಂಭಿಕನಾಗಿ ಸ್ಥಾನ ಪಡೆದಿದ್ದಾರೆ.
ಗಂಭೀರ್ ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ನಿರ್ವಹಣೆ ತೋರಿರುವುದೂ ಪುನರಾಗಮನಕ್ಕೆ ಕಾರಣವಾಗಿದೆ. ಕಳೆದ ದುಲೀಪ್ ಟ್ರೋಫಿಯಲ್ಲಿ ಇಂಡಿಯಾ ಬ್ಲೂ ತಂಡವನ್ನು ಮುನ್ನಡೆಸಿದ್ದ ಗಂಭೀರ್ ಸತತ ಅರ್ಧಶತಕಗಳೊಂದಿಗೆ ಮಿಂಚಿದ್ದರು. 5 ಇನ್ನಿಂಗ್ಸ್ ಗಳಲ್ಲಿ ಒಟ್ಟು 356 ರನ್ ಪೇರಿಸಿದ್ದರು.
ಗೌತಮ್ ಗಂಭೀರ್ 2014ರ ಆಗಸ್ಟ್ ನಲ್ಲಿ ಇಂಗ್ಲೆಂಡ್ ವಿರುದ್ಧ ಓವಲ್ ನಲ್ಲಿ ಕೊನೇ ಪಂದ್ಯವಾಡಿದ್ದರು. ಟೀಂ ಇಂಡಿಯಾ ಪರ 56 ಟೆಸ್ಟ್ ಅಡಿ 9 ಶತಕ ಸಹಿತ 4,046 ರನ್ ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


