ಅಲೆಕ್ಸ್ ಮಾರ್ಷಲ್ ಐಸಿಸಿ ಭ್ರಷ್ಟಾಚಾರ ವಿರೋಧಿ ಘಟಕದ ಪ್ರಧಾನ ವ್ಯವಸ್ಥಾಪಕ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಲೆಕ್ಸ್ ಮಾರ್ಷಲ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ...

Published On :
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಲೆಕ್ಸ್ ಮಾರ್ಷಲ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಇಂಗ್ಲೆಂಡ್ ಮತ್ತು ವೇಲ್ಸ್ ನ ಪೊಲೀಸ್ ಇಲಾಖೆಯ ಕಾಲೇಜ್ ಆಫ್ ಪೊಲೀಸಿಂಗ್ ನ ಪ್ರಧಾನ ಕಾರ್ಯದರ್ಶಿಯಾಗಿರುವ 55 ವರ್ಷದ ಮುಖ್ಯ ಪೇದೆ ಅಲೆಕ್ಸ್ ಮಾರ್ಷಲ್ ಭ್ರಷ್ಟಾಚಾರ ವಿರೋಧಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು ಸೆಪ್ಟೆಂಬರ್ ನಲ್ಲಿ ಮಂಡಳಿಯನ್ನು ಸೇರಿಕೊಳ್ಳಲಿದ್ದಾರೆ.
1980ರಲ್ಲಿ ಪೊಲೀಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಅಲೆಕ್ಸ್ ಅವರು 2008ರಲ್ಲಿ ಹ್ಯಾಂಪ್ಶೈರ್ ನ ಮುಖ್ಯ ಪೇದೆಯಾಗಿ ನೇಮಕಗೊಂಡರು. ನಂತರ 2012ರಲ್ಲಿ ನ್ಯೂ ಕಾಲೇಜ್ ಆಫ್ ಪೊಲೀಸಿಂಗ್ ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


