ಪುಣೆ ವಿರುದ್ಧ ಮುಗ್ಗರಿಸಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಅಜಿಂಕ್ಯ ರಹಾನೆ...

Published On :
ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಹಾಗೂ ನಾಯಕ ಸ್ಟೀವ್ ಸ್ಮಿತ್ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಮುಂಬೈ ವಿರುದ್ಧ ಪುಣೆ ಭರ್ಜರಿ ಜಯ ಗಳಿಸಿದೆ.
ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪುಣೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಗಳನ್ನು ಸಿಡಿಸಿತು. 186 ರನ್ ಗಳ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಪುಣೆ ಕೊನೆಯ ಎಸತಕ್ಕೂ ಮುನ್ನ 187 ರನ್ ಸಿಡಿಸಿ ಗೆಲುವಿನ ನಗೆ ಬೀರಿತು.
ಮುಂಬೈ ಇಂಡಿಯನ್ಸ್ ಪರ ಜೋಸ್ ಬಟ್ಲರ್ 38, ನಿತೀಶ್ ರಾಣಾ 34, ಹಾರ್ದಿಕ್ ಪಾಂಡ್ಯ ಅಜೇಯ 35 ರನ್ ಸಿಡಿಸಿದರು. ಪುಣೆ ಪರ ಬೌಲಿಂಗ್ ನಲ್ಲಿ ಇಮ್ರಾನ್ ತಾಹಿರ್ 3, ರಜತ್ ಭಾಟಿಯಾ 2 ವಿಕೆಟ್ ಪಡೆದರು.
ಪುಣೆ ಸೂಪರ್ ಜೈಂಟ್ ಪರ ಅಜಿಂಕ್ಯ ರಹಾನೆ 60, ಸ್ಟೀವ್ ಸ್ಮಿತ್ ಅಜೇಯ 84, ಎಂಎಸ್ ಧೋನಿ ಅಜೇಯ 12 ರನ್ ಗಳಿಸಿದರು. ಮುಂಬೈ ಪರ ಬೌಲಿಂಗ್ ನಲ್ಲಿ ಟಿಮ್ ಸೌಥಿ, ಹಾರ್ದಿಕ್ ಪಾಂಡ್ಯ, ಮೆಕ್ಲನಾಗೆನ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ajinkya RahaneMumbai Indiansಮುಂಬೈ ಇಂಡಿಯನ್ಸ್ಅಜಿಂಕ್ಯ ರಹಾನೆRising Pune Supergiantsರೈಸಿಂಗ್ ಪುಣೆ ಸೂಪರ್ ಜೈಂಟ್ಸ್ಐಪಿಎಲ್ 2017IPL 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


