ಐಪಿಎಲ್‌ನಲ್ಲಿ ಗರಿಷ್ಠ ರನ್‌ನಲ್ಲಿ ವಿರಾಟ್ ಕೊಹ್ಲಿ ಹಿಂದಿಕ್ಕಿದ ಸುರೇಶ್ ರೈನಾ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಇತಿಹಾಸದಲ್ಲಿ ಗರಿಷ್ಠ ರನ್ ಕಲೆಹಾಕಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸುರೇಶ್ ರೈನಾ ಮತ್ತೊಮ್ಮೆ...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಇತಿಹಾಸದಲ್ಲಿ ಗರಿಷ್ಠ ರನ್ ಕಲೆಹಾಕಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸುರೇಶ್ ರೈನಾ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ.
ಗುಜರಾತ್ ಲಯನ್ಸ್ ತಂಡದ ನಾಯಕ ಸುರೇಶ್ ರೈನಾ ನಿನ್ನೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸುರೇಶ್ ರೈನಾ 68 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿಯ ಸಾಧನೆಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ದಾಖಲೆ ಮುರಿಯಲು ರೈನಾಗೆ ಕೇವಲ 13 ರನ್ ಗಳಷ್ಟೇ ಬೇಕಾಗಿತ್ತು.
ಮೊದಲು ಬ್ಯಾಟ್ ಮಾಡಿದ ಗುಜರಾತ್ ಲಯನ್ಸ್ ಪರ ಸುರೇಶ್ ರೈನಾ ಅಜೇಯ 68 ರನ್ ಗಳಿಸಿದ್ದು 4166 ರನ್ ಗಳೊಂದಿಗೆ ರೈನಾ ಅಗ್ರಸ್ಥಾನದಲ್ಲಿದ್ದಾರೆ. ಇನ್ನು 4110 ರನ್ ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿSuresh Rainaಸುರೇಶ್ ರೈನಾRCBಆರ್ಸಿಬಿGujarat Lionsಗುಜರಾತ್ ಲಯನ್ಸ್ಐಪಿಎಲ್ 2017IPL 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


